ಚನ್ನರಾಯಪಟ್ಟಣ : ತಾಲೂಕು ಪಂಚಾಯತಿ ಆವರಣದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆ ಯೋಜನೆ ಮಾಡಿದ ನಮ್ಮ ನಡೆಗೆ ಮತಗಟ್ಟೆ ಕಡೆಗೆ ಎಂಬ ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಜಿ ಆರ್ ಹರೀಶ್ ಮಾತನಾಡಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವವುಳ್ಳ ದೇಶ ಭಾರತ ಪ್ರಜಾಪ್ರಭುತ್ವದಲ್ಲಿ ಮತದಾರನೇ ನಿಜವಾದ ಪ್ರಭು ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯಬೇಕೆಂದರೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು.

ಮತದಾನ ನಮಗೆ ಸಂವಿಧಾನಾತ್ಮಕವಾಗಿ ದೊರೆತಿರುವ ಹಕ್ಕು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಗೆ ಪ್ರಭಾವಿತರಾಗದೇ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದರು.

ಈಗಾಗಲೇ 85 ವರ್ಷ ತಲುಪಿದ ಮತದಾರರು ಹಾಗೂ ವಿಶೇಷ ಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಚುನಾವಣಾ ಕರ್ತವ್ಯದಲ್ಲಿರುವ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಅಂಗವಿಕಲರಿಗೆ ಮತದಾನ ಮಾಡಲು ಸುಗಮವಾಗುವಂತೆ ವಾಹನದ ವ್ಯವಸ್ಥೆ, ಮತಗಟ್ಟೆಗಳಲ್ಲಿ ಇಳಿಜಾರು(Ramp and railings) ವ್ಯವಸ್ಥೆ ಮಾಡಲಾಗಿದೆ ತಾಲ್ಲೂಕಿನ ಎಲ್ಲ ಮತಗಟ್ಟೆಗಳಲ್ಲಿ “ನಮ್ಮ ನಡೆ ಮತಗಟ್ಟೆ ಕಡೆ” ಕಾರ್ಯಕ್ರಮವನ್ನು ಹಮ್ಮಿಕೊಂಡು ಚುನಾವಣಾ ಆಯೋಗದ ಧ್ವಜಾರೋಹಣ ಮಾಡುವ ಮೂಲಕ ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಕಡಿಮೆ ಮತದಾನ ವಾಗಿರುವ ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಕಾಲ್ನಡಿಗೆ ಜಾಥಾ, ಬೈಕ್ ರ್ಯಾಲಿ, ಬೀದಿ ನಾಟಕ, ಪಂಜಿನ ಮೆರವಣಿಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಜತೆಗೆ ಮತದಾನದ ದಿನಾಂಕವಿರುವ ಸ್ಟಿಕ್ಕರ್ ಅಂಟಿಸಲಾಗುತ್ತಿದೆ.

ಮತಗಟ್ಟೆಗಳಲ್ಲಿ ಕುಡಿಯುವ ನೀರು, ನೆರಳು, ವಿದ್ಯುತ್ ಸಂಪರ್ಕ ಕಲ್ಪಿಸುವ ಜತೆಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮತದಾನಕ್ಕೆ ಸಜ್ಜುಗೊಳಿಸಲಾಗಿದೆ.

ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸದೃಢ ನವ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಸಹಾಯಕ ಚುನಾವಣೆ ಅಧಿಕಾರಿ ರಂಗಸ್ವಾಮಿ, ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷರಾದ ಜಿ ಆರ್ ಹರೀಶ್, ತಾಲೂಕು ದಂಡಾಧಿಕಾರಿ ಬಿಎಮ್ ಗೋವಿಂದರಾಜು, ಪುರಸಭಾ ಮುಖ್ಯ ಅಧಿಕಾರಿ ಹೇಮಂತ್ ಕುಮಾರ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಗಿರೀಶ್, ಟಿಪಿಎಂ ದೇವರಾಜ್, ಪುರಸಭಾ ನೌಕರರ ಉಮಾದೇವಿ, ಶಾರದಮ್ಮ, ನಿಂಗರಾಜು, ಸೇರಿದಂತೆ ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *