ಕರ್ನಾಟಕ : ರಾಜ್ಯದಲ್ಲಿ ಮೊದಲ ಹಂತದ ಲೋಕ ಸಮರಕ್ಕೆ ಕೌಂಟ್ ಡೌನ್ ಶುರುವಾಗಿದೆ. ಪ್ರಜಾಪ್ರಭುತ್ವದ ಹಬ್ಬಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ರಾಜಕಾರಣಿಗಳ ಭವಿಷ್ಯ ಬರೆಯೋ ಮತಯಂತ್ರಗಳು ಮತಗಟ್ಟೆಗಳನ್ನ ಸೇರಿವೆ.

ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ತನಕ ಮತದಾನ ನಡೆಯಲಿದೆ. ಚುನಾವಣಾ ಕರ್ತವ್ಯಕ್ಕೆ ತೆರಳುವ ಸಿಬ್ಬಂದಿ, ಅಂಚೆ ಮತದಾನ ಮಾಡಿ ಕರ್ತವ್ಯಕ್ಕೆ ತೆರಳಿದ್ದಾರೆ.

ಇನ್ನು, ಮತದಾನಕ್ಕೆ ಹೋಗೋ ಸಂದರ್ಭದಲ್ಲಿ ನೀವು ರಿಜಿಸ್ಟರ್ಡ್ ವೋಟರ್ ಆಗಿಯೂ ನಿಮ್ಮ ಬಳಿ ವೋಟರ್‌ ಐಡಿ ಮಿಸ್ಸಾಗಿದ್ರೆ ಚಿಂತೆ ಬೇಡ.. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಬ್ಯಾಂಕ್, ಅಂಚೆ ಕಚೇರಿ ನೀಡಿದ ಭಾವಚಿತ್ರ ಇರುವ ಪಾಸ್ ಬುಕ್, ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್‌, ಡ್ರೈವಿಂಗ್ ಲೈಸೆನ್ಸ್‌, ಪಾಸ್‌ಪೋರ್ಟ್‌ ಹೀಗೆ ಕೇಂದ್ರ, ರಾಜ್ಯ, ಸಾರ್ವಜನಿಕ ಸಂಸ್ಥೆಗಳು ನೀಡಿದ ಭಾವಚಿತ್ರ ಇರುವ ಸೇವಾ ಗುರುತಿನ ಚೀಟಿ ತೋರಿಸಿದ್ರೆ ಸಾಕು. ಅದಲ್ಲದೇ ಮತದಾರರಿಗೆ ನೀರು, ನೆರಳು, ಪಾರ್ಕಿಂಗ್ ಸೇರಿ ಮೂಲಸೌಕರ್ಯ ಕಲ್ಪಿಸಲು ಸಿದ್ಧತೆ ಕೂಡ ನಡೆದಿದೆ. ಇನ್ನು, ಮಹಿಳೆಯರಿಗಾಗಿ ಪ್ರತಿ ಕ್ಷೇತ್ರದಲ್ಲಿ 5 ಸಖೀ ಪಿಂಕ್ ಬೂತ್ ಗಳನ್ನ ನಿರ್ಮಾಣ ಮಾಡಲಾಗಿದೆ. ದಿವ್ಯಾಂಗರಿಗೆ ವೀಲ್ ಚೇರ್ ವ್ಯವಸ್ಥೆ ಇರಲಿದ್ದು, ವಿವಿಧ ಥೀಮ್​​ಗಳ ಅಡಿಯಲ್ಲಿ ಮತಗಟ್ಟೆ ನಿರ್ಮಿಸಿ ಮತದಾರರನ್ನ ಸೆಳೆಯಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *