
ಬೇಲೂರು : ಮೊದಲನೇ ಹಂತದ ಲೋಕಸಭಾ ಚುನಾವಣೆ ಅಂಗವಾಗಿ ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್ ಕೆ ಸುರೇಶ್ ತಮ್ಮ ಕುಟುಂಬದೊಂದಿಗೆ ಹಕ್ಕನ್ನು ಚಲಾಯಿಸಿದರು.
ಪಟ್ಟಣದ ಸರ್ಕಾರಿ ಹಿರಿಯ ಬಾಲಕಿಯರ ಪ್ರಾಥಮಿಕ ಶಾಲೆಯ ಮತ ಕೇಂದ್ರದಲ್ಲಿ ಬೆಳಿಗ್ಗೆ 11 ಗಂಟೆಗೆ ಮತಗಟ್ಟೆಗೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿ ಮಾಧ್ಯಮದೊಂದಿಗೆ ಮಾತನಾಡಿ ಪ್ರಪ್ರಥಮವಾಗಿ ನಮಗೆ ಮತದಾನದ ಹಕ್ಕನ್ನು ನೀಡಿದ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಸ್ಮರಣೆ ಮಾಡುತ್ತಾ ದೇಶದ ಅಭಿವೃದ್ಧಿಗಾಗಿ ದೇಶದ ಪ್ರತಿ ಪ್ರಜೆಯು ಮತದಾನ ಮಾಡುವ ಮೂಲಕ ದೇಶ ಅಭಿವೃದ್ಧಿಯತ್ತ ಸಾಗಲು ಸಹಕರಿಸಬೇಕು.
ಲೋಕಸಭಾ ಚುನಾವಣೆಯ ಮೊದಲನೇ ಹಂತದ ಹಾಸನ ಲೋಕಸಭಾ ಚುನಾವಣೆ ಏಪ್ರಿಲ್ 26 ಮುಂಜಾನೆ 7 ಗಂಟೆಯಿಂದ ಆರಂಭಗೊಂಡಿದ್ದು ಕ್ಷೇತ್ರಾದ್ಯಂತ ಬಿರುಸಿನ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಕ್ಷೇತ್ರದ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸಬೇಕೆಂದು ಹೇಳಿದ ಅವರು ಈ ಬಾರಿ ನಾವು ದೇಶದ ಪ್ರಗತಿಗಾಗಿ ಹಾಗೂ ಮತ ಕೇಳುತ್ತಿದ್ದೇವು ಆದರೆ ನಮಗಾಗಿ ಅಲ್ಲದೆ ದೇಶದ ರಕ್ಷಣೆಗೆ ಮೋದಿಗಾಗಿ ಮತವನ್ನು ಕೇಳುತ್ತಿದ್ದೇವೆ.
ಈ ಬಾರಿ ನಮ್ಮ ಮೈತ್ರಿ ಅಭ್ಯರ್ಥಿ ಗೆಲ್ಲುವುದು ಶತಸಿದ್ಧ ತಪ್ಪದೆ ಎಲ್ಲರೂ ಮತದಾನ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿಧಿ,ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ರೀನಿವಾಸ್,ಶೇಖರ್,ನಾಗೇಶ್ ಯಾದವ್, ಇತರರು ಹಾಜರಿದ್ದರುಇದೆ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಮತದಾನವನ್ನು ಮಾಡಲು ಸಾರಥಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು




