ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣನವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಪಕ್ಷದ ಘನತೆ ಮತ್ತು ಗೌರವಗಳಗ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ.
ಮುಂದುವರೆದು, ರಾಜ್ಯದಲ್ಲಿನ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮೇಲೆ ಎಸಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ಒಂದು ವಿಶೇಷ ತನಿಖಾದಳ (Special Investigation Team- SIT) ರಚಿಸಿದೆ ಮತ್ತು ಈ ತನಿಖಾದಳ ಈಗಾಗಲೇ ತನ್ನ ಕಾರ್ಯಗಳನ್ನು ಪ್ರಾರಂಭಿಸಿದೆ.
ಈ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ Article XXII-Breach of Discipline-4 ಹಾಗೂ Punishment-60go ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣರವರನ್ನು ತತ್ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತ್ತುಗೊಳಸಲಾಗಿದೆ.
ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯಂತೆ.