ಹಾಸನ : ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ರವರನ್ನು ಕೂಡಲೇ ಹೈಕೋರ್ಟ್ ನ್ಯಾಯಾಧೀಶ ರಿಂದ ತನಿಖೆ ನಡೆಸಿ ಕಠಿಣೆ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿಯಿಂದ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಜೈ ಭೀಮ್ ಬ್ರಿಗೇಡ್ ಸಂಘಟನಾ ಸಮಿತಿ ಜಿಲ್ಲಾಧ್ಯಕ್ಷ ರಾಜೇಶ್ ಮಾಧ್ಯಮದೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರದ ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು ಕೂಡಲೆ ಬಂದಿಸಬೇಕು ಹಾಗೂ ಅವರ ಕುಟುಂಬಕ್ಕೆ ಭದ್ರತೆ ನೀಡುತ್ತಿರುವ ಎಸ್ಕಾರ್ಟ್‌ನ್ನು ಕರ್ನಾಟಕ ಸಕಾರ ಕೂಡಲೇ ವಾಪಾಸ್ ಪಡೆದುಕೊಂಡು ಮುಕ್ತವಾಗಿ ತನಿಖೆ ನಡೆಸಬೇಕು. ಹಾಲಿ ಹೈಕೋರ್ಟ್ ನ್ಯಾಯಧೀಶರಿಂದ ತನಿಖೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿದವರ ವಿರುದ್ಧ ಕಠಿಣ ಶಿಕ್ಷಗೆ ಒಳಪಡಿಸಬೇಕೆಂದು ಜೈ ಭೀಮ್ ಬ್ರಿ ಗ್ರೇಡ್ ಸಂಘಟನಾ ಸಮಿತಿ ಮತ್ತು ಅನೇಕ ದಲಿತ ಸಂಘಟನೆಗಳು ಸರ್ಕಾರಕ್ಕೆ ಅಗ್ರಹಿಸುತ್ತದೆ ಎಂದರು.

ಶಾಸಕ ಹೆಚ್.ಡಿ.ರೇವಣ್ಣ ಕುಟುಂಬಕ್ಕೆ ನೀಡಿರುವ ಭದ್ರತೆ ಸಿಬಂದಿಯನ್ನು ವಾಪಸ್ ಪಡೆದು ಕೊಂಡು ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ಥ ಕುಟುಂಬಗಳಿಗೆ ಸರ್ಕಾರ ಭದ್ರತೆ ನೀಡಬೇಕೆಂದು ಆಗ್ರಹಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹಾಲಿ ಶಾಸಕ ಹೆಚ್.ಡಿ. ರೇವಣ್ಣ ಕುಟುಂಬದ ಸ್ಥಿರ ಹಾಗೂ ಚರಾಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡು ಲೈಂಗಿಕ ದೌರ್ಜನ್ಯಕ್ಕೆ ಒಳಾಗಾಗಿರುವ ಸಾವಿರಾರು ಕುಟುಂಬಗಳಿಗೆ ಇವರ ಅಸ್ತಿ ಹಂಚಿಕೆ ಮಾಡಬೇಕು. ಶಾಸಕ ಹೆಚ್.ಡಿ. ರೇವಣ್ಣ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕುಟುಂಬಗಳ ಪಾಸ್ ಪೋರ್ಟ್ ವಶಪಡಿಸಿಕೊಂಡ/ ತಲೆ ಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣನಿಗೆ ರೆಡ್ ಕಾರ್ನರ್ ನೋಟೀಸ್ ಜಾರಿ ಮಾಡಿ ವಿದೇಶದಿಂದ ಕರೆತಂದು ತನಿಖೆ ನಡೆಸಿ ಜೈಲ್ ಶಿಕ್ಷೆ ವಿದಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜೈಭೀಮ್ ಬ್ರಿಗೇಡ್ ಸಂಘಟನಾ ಸಮಿತಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಹರೀಶ್ ಹುಳವಾರೆ, ತಾಲೂಕು ಅಧ್ಯಕ್ಷ ಶಂಕರ್, ರಾಜ್ಯ ಹಂದಿ ಜೋಗಿ ಉಪಾಧ್ಯಕ್ಷ ಗೋವಿಂದರಾಜು, ದಲಿತ ಮುಖಂಡ ಸುಬ್ರಮಣ್ಯ ಇತರರು ಉಪಸ್ಥಿತರಿದ್ರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed