ಭಾರತ ಚುನಾವಣೆ ಆಯೋಗವು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಸುವ ಬಗ್ಗೆ ದಿನಾಂಕ:02/05/2024 ರಂದು ಪತ್ರಿಕಾ ಪ್ರಕಟಣೆ ಮೂಲಕ ಚುನಾವಣೆಯನ್ನು ಘೋಷಿಸಿರುತ್ತದೆ.
ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30/12/2023 ರಂದು ಪ್ರಕಟಿಸಲಾಗಿರುತ್ತದೆ. ಜನವರಿ ತಿಂಗಳಿನಿಂದ ನಿರಂತರ ಪರಿಕ್ಷರಣೆ ಅಡಿಯಲ್ಲಿ ಅರ್ಜಿಗಳನ್ನು ದಿನಾಂಕ:06/05/2024 ರ ಸಂಜೆ 05:30 ಗಂಟೆಯವರೆಗೆ ಸ್ವೀಕರಿಸಲು ಅವಕಾಶ ಕಲ್ಪಸಲಾಗಿರುತ್ತದೆ.
ಅರ್ಹ ವ್ಯಕ್ತಿಯು, ನಮೂನೆ-19 ರ ಅರ್ಜಿಗಳನ್ನು ಜಿಲ್ಲೆಯ ತಾಲ್ಲೂಕು ಕಛೇರಿಗಳಿಂದ ಪಡೆದು ಸೂಕ್ತ ರೀತಿಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.
ದಕ್ಷಿಣ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ದಾಖಲು ಮಾಡಬಯಸುವ ವ್ಯಕ್ತಿಯು ಭಾರತದ ಪ್ರಜೆಯಾಗಿರತಕ್ಕದ್ದು. ಆಯಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರಬೇಕು.
ಅರ್ಹತಾ ದಿನಾಂಕ:01/11/2023 ಕ್ಕೆ ಮೊದಲು ಆರು ವರ್ಷದೊಳಗೆ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದ ದರ್ಜೆಯಲ್ಲಿ ನಿರ್ದಿಷ್ಟಪಡಿಸಿದಂತ ರಾಜ್ಯದೊಳಗಿನ ಯಾವುದೇ ಅರ್ಹ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ ಮೂರು ವರ್ಷಗಳ ಬೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ಬೋಧಕರು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.