ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯಾಗಿರುವ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಹೆಚ್‌.ಡಿ ರೇವಣ್ಣ ವಿರುದ್ದ ಮೈಸೂರಿನ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇಂದು (ಮೇ 4) ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಜಾಮೀನು ನೀಡಲು ನಿರಾಕರಿಸಿದ್ದಾರೆ.

ಅರ್ಜಿಯ ಮುಂದಿನ ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದ್ದಾರೆ.

ಜಾಮೀನು ನಿರಾಕರಣೆ ಬೆನ್ನಲ್ಲೇ ಎಸ್‌ಐಟಿ ರೇವಣ್ಣ ಅವರನ್ನು ವಶಕ್ಕೆ ಪಡೆದಿದೆ.

ಬೆಂಗಳೂರಿನ ಪದ್ಮನಾಭ ನಗರದ ಹೆಚ್‌.ಡಿ ದೇವೇಗೌಡರ ನಿವಾಸದಿಂದ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *