
ಸಕಲೇಶಪುರ : ತಾಲೂಕಿನ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಹಾಸನ ಲೋಕಾಯುಕ್ತರು ದಿನಾಂಕ 8-5-2024 ರ ಬುಧವಾರ ಪಟ್ಟಣದ ತಹಸಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ಅರ್ಜಿ ಸ್ವೀಕಾರ ಮಾಡಲಿದ್ದು ಸಕಲೇಶಪುರ ತಾಲೂಕಿನ ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಬಗ್ಗೆ ಬೆಳಗ್ಗೆ 11-30 ರಿಂದ 1-30 ರವರೆಗೆ ತಹಸೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಇದರ ಉಪಯೋಗವನ್ನು ಸಾರ್ವಜನಿಕರು ಪಡೆಯಬಹುದಾಗಿದೆ ಎಂದು ತಹಸಿಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

