ಹಾಸನ : ಮಾಜಿ ಸಚಿವರು ಹಾಲಿ ಶಾಸಕರಾದ ಎಚ್ ಡಿ ರೇವಣ್ಣ ಅವರ ಬಂಧನದಲ್ಲಿ ಸರ್ಕಾರದ ಪಾತ್ರ ಇದೆ ಎಂದು ವಿರೋಧಿಸಿ ನಾಳೆ ಹಾಸನದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಪೆನ್ ಡ್ರೈವ್ ಹಗರಣಕ್ಕೆ ಸಂಬಂದಿಸಿದಂತೆ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಹೆಚ್.ಡಿ.ರೇವಣ್ಣ ಅವರನ್ನು ಎಸ್.ಐ.ಟಿ.ಅವರು ಬಂದಿಸಿರುವ ಹಿಂದೆ ರಾಜ್ಯ ಸರ್ಕಾರದ ಕೈವಾಡವಿದೆ ಇದನ್ನು ಕೂಡಲೇ ಸಿ.ಬಿ.ಐ ತನಿಖೆಗೆ ಒಪ್ಪಿಸಬೇಕೆಂದು ಹಾಗೂ ಯಾವುದೇ ತಪ್ಪು ಮಾಡದ ಹೆಚ್.ಡಿ.ರೇವಣ್ಣ ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ನಾಳೆ ಹಾಸನದ ಹೇಮಾವತಿ ಪ್ರತಿಮೆ ಬಳಿಯಿಂದ ಭೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಬೆಯನ್ನು ಜೆಡಿಎಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ ಎಂದು ಹಾಸನ ಜಿಲ್ಲಾ ಜೆಡಿಎಸ್ ಅದ್ಯಕ್ಷರಾದ ಲಿಂಗೇಶ್ ತಿಳಿಸಿದ್ದಾರೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *