ರಾಜ್ಯದಲ್ಲಿ ಎರಡನೇ ಸುತ್ತಿನ ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳ 227 ಅಭ್ಯರ್ಥಿಗಳ ಭವಿಷ್ಯ ಇಂದು ತೀರ್ಮಾನವಾಗಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗವು ಸಕಲ ಸಿದ್ಧತೆ ಕೈಗೊಂಡಿದೆ.

ಮತ ಕೇಂದ್ರಗಳಿಗೆ ಮತಯಂತ್ರ, ಮತದಾನದ ಸಾಮಗ್ರಿ ಕಳುಹಿಸಿಕೊಡಲಾಗಿದ್ದು, ಸಿಬ್ಬಂದಿಗಳು ತಮಗೆ ವಹಿಸಿರುವ ಮತಗಟ್ಟೆಗಳಿಗೆ ತೆರಳಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ 28,269 ಮತಗಟ್ಟೆಗಳಲ್ಲಿ ನಡೆಯುವ ಮತದಾನದ ವೇಳೆ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿ ದ್ದಾರೆ.

ಚುನಾವಣಾ ಅಖಾಡದಲ್ಲಿರುವ 227 ಅಭ್ಯ ರ್ಥಿಗಳ ಪೈಕಿ 206 ಪುರುಷರು, 21 ಮಹಿಳೆಯರಿದ್ದಾರೆ. ದಾವಣಗೆರೆಯಲ್ಲಿ ಗರಿಷ್ಠ 30 ಅಭ್ಯರ್ಥಿಗಳು ಮತ್ತು ರಾಯಚೂರಿನಲ್ಲಿ ಕನಿಷ್ಠ 8 ಅಭ್ಯರ್ಥಿಗಳಿದ್ದಾರೆ.

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತದಾನವು ಇಂದು ಬೆಳಿಗ್ಗೆ 7 ರಿಂದ ಸಾಯಂಕಾಲ 6 ಗಂಟೆ ವರೆಗೂ ನಡೆಯಲಿದ್ದು, ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ.200 ಮೀಟರ್ ವ್ಯಾಪ್ತಿಯಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.200 ಮೀಟರ್ ವ್ಯಾಪ್ತಿಯಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಮತದಾನ ಶಾಂತಿಯುತ ಮತ್ತು ಸುಸೂತ್ರವಾಗಿ ನಡೆಯುವಂತೆ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. 144 ಜಾರಿಗೊಳಿಸಿದ್ದು, ಚುನಾವಣಾ ಸಿಬ್ಬಂದಿ ಹೊರತುಪಡಿಸಿ 5 ಜನಕ್ಕಿಂತ ಹೆಚ್ಚು ಗುಂಪಾಗಿ ಸೇರುವಂತಿಲ್ಲ. ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ-1993ರ ನಿಯಮ 36 ರನ್ವಯ ಮತದಾನ ದಿನದಂದು ಸಂತೆ, ಜಾತ್ರೆ, ಉತ್ಸವ ಹಾಗೂ ಉರುಸ್‍ಗಳನ್ನು ಸಹ ನಿಷೇಧಿಸಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *