ಆಲೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಬ್ಲ್ಯಾಕ್ ಕಾಂಗ್ರೆಸ್ ಪಕ್ಷ ಹಾಗೂ ಅಭಿಮಾನಿಗಳು ಸಿಹಿ ಹಂಚುವ ಮೂಲಕ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.ಆಲೂರು ಪಟ್ಟಣದ ಬಸ್ ನಿಲ್ದಾಣ ಮುಂಭಾಗದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಪರವಾಗಿ ಘೋಷಣೆ ಕೂಗಿ ಸಂಭ್ರಮ ಆಚರಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಸ್.ಶಿವಮೂರ್ತಿ ಮಾತನಾಡಿ ಸಿದ್ದರಾಮಯ್ಯ ಅವರು ಕಳೆದ ಬಾರಿ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಜನರಿಗೆ ನೀಡಿದ್ದ ಆಶ್ವಾಸನೆಗಳಲ್ಲಿ ಶೇ.90 ರಷ್ಟು ಇಡೇರಿಸುವ ಮೂಲಕ ನುಡಿದಂತೆ ನಡೆದಿದ್ದಾರೆ ಕಳೆದ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಕಾರ್ಡ್ ನೀಡಿ ಚುನಾವಣೆ ಎದುರಿಸಿತ್ತು ಈ ಸಂದರ್ಭದಲ್ಲಿ ಮತದಾರರು 135 ಸೀಟುಗಳನ್ನು ನೀಡುವ ಮೂಲಕ ಅಭೂತಪೂರ್ವ ಗೆಲುವು ತಂದು ಕೊಟ್ಟಿದ್ದಾರೆ ಅದ್ದರಿಂದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆ ಇಡೇರಿಸುತ್ತದೆ ಎಂದರು.ತಾಲ್ಲೂಕು ಕಾಂಗ್ರೆಸ್ ಉಪಾಧ್ಯಕ್ಷ ಹೆಚ್.ಸಿ.ಶಾಂತಕೃಷ್ಣ ಮಾತನಾಡಿ ಸಿದ್ದರಾಮಯ್ಯನವರು ಅಹಿಂದ ಸಮಾಜದ ಹಾಗೂ ಪಕ್ಷದ ಪ್ರಭಾವಿ ನಾಯಕರಾಗಿದ್ದಾರೆ. ಪಕ್ಷ ಕಟ್ಟುವಲ್ಲಿ ಅವರು ನೀಡಿದ ಕೊಡುಗೆಯನ್ನು ಹಾಗೂ ಈ ಹಿಂದೆ ಅವರು ನಡೆಸಿದ ಆಡಳಿತವನ್ನು ಪರಿಗಣಿಸಿ ಪುನಃ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಿರುವುದು ಕಾರ್ಯಕರ್ತರಿಗೆ ಬಲ ತುಂಬಿದಂತಾಗಿದೆ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಯುವಕರನ್ನು ಒಗ್ಗೂಡಿಸಿಕೊಂಡು ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಪಕ್ಷವನ್ನು ಸಂಘಟಿಸಿದ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸಿರುವುದು ಉತ್ತಮ ಆಡಳಿತ ನಿರೀಕ್ಷೆಯನ್ನು ಹೆಚ್ಚಿಸಿದೆ ಎಂದರು.ವಿಜಯೋತ್ಸವದ ಸಂಭ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಎಸ್ ಶಿವಮೂರ್ತಿ,ಮಾಜಿ ಅಧ್ಯಕ್ಷ ರಂಗನಾಥ್,ತಾಲ್ಲೂಕು ಕಾಂಗ್ರೆಸ್ ಉಪಾಧ್ಯಕ್ಷ ಶಾಂತಕೃಷ್ಣ,ಕೆಪಿಸಿಸಿ ಮಾಜಿ ಸದಸ್ಯ ಎಚ್.ಪಿ.ಮೋಹನ್, ತಾಲೂಕ್ ಪಂಚಾಯತಿ ಮಾಜಿ ಸದಸ್ಯ ಎಂ.ಎಚ್.ರಂಗೇಗೌಡ, ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಣ್ಣ, ಮುಖಂಡರುಗಳಾದ ಟೀಕರಾಜ್,ಶಾಂತಪ್ಪ,ಹೊನ್ನಪ್ಪ, ಪುಟ್ಟರಾಜಗೌಡ,ಲೋಕೇಶ್,ಲೋಕೇಶ್ ಅಜ್ಜನಹಳ್ಳಿ, ಸರ್ವರ್ ಪಾಷಾ,ಲೋಹಿತ್, ಸೇರಿದಂತೆ ಇತರರು ಇದ್ದರು.