ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ದಿ:23.05.20204 ಹಾಗೂ 24.05.2024 ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕ್ರೀಡಾಕೂಟವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಸಿ. ಎಸ್. ಷಡಾಕ್ಷರಿ ರವರ ಉಪಸ್ಥಿತಿಯಲ್ಲಿ, ಮತ್ತು ಹಾಸನದ ಜಿಲ್ಲಾಧಿಕಾರಿಯವರಾದ ಸಿ ಸತ್ಯಭಾಮ ರವರು ದಿನಾಂಕ:23.05.2024 ರಂದು ಬೆಳ್ಳಿಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮವನ್ನು ನೇರವೇರಿಸಲ್ಲಿದ್ದಾರೆ.
ಈ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕಲೇಶಪುರ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯ ನೌಕರರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಸಕಲೇಶಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾರ ಹೆಚ್.ಎನ್. ಕೃಷ್ಣಮೂರ್ತಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.