ಆಲೂರು : ರಂಗಸ್ವಾಮಿ 23 ಮೃತ ದುರ್ದೈವಿ ಈತ ತಾಲೂಕಿನ ಭರತವಳ್ಳಿ ಗ್ರಾಮದವನು ಆಲೂರು ಕೆಬಿ ಸಮೀಪ ಇರುವ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿರುವ ಮೃತ ಎಂದಿನಂತೆ ಕೆಲಸ ಮುಗಿಸಿಕೊಂಡು ಇಂದು ಬೆಳಗ್ಗೆ ಮನೆಗೆ ತೆರಳುತ್ತಿದ್ದಾಗ ಹಾಸನ ಕಡೆಯಿಂದ ಬಂದಂತಹ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಬೈಪಾಸ್ ರಸ್ತೆಯಿಂದ ಆಲೂರು ಮಾರ್ಗವಾಗಿ ಬರುವ ಸಂದರ್ಭದಲ್ಲಿ ರಸ್ತೆ ಚಿಕ್ಕದಾಗಿರುವುದರಿಂದ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡಿದರು ಕೂಡ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ರಸ್ತೆಯ ಬದಿಯಲ್ಲಿ ಮರಗಳಿದ್ದು ಇದು ಅಪಘಾತಕ್ಕೆ ಆಹ್ವಾನಿಸುತ್ತಿದೆ ಅರಣ್ಯ ಇಲಾಖೆಗೆ ಸ್ಥಳೀಯರು ಸಾಕಷ್ಟು ಬಾರಿ ದೂರು ನೀಡಿದ್ದರು ಕೂಡ ಗಮನಹರಿಸುತ್ತಿಲ್ಲ ಇದೇ ರೀತಿ ಮುಂದುವರೆದರೆ ಮುಂದೆ ದಿನಗಳಲ್ಲಿ ಪಟ್ಟಣದ ನಿವಾಸಿಗಳು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *