ಹಾಸನ : ಕುಖ್ಯಾತ ರೌಡಿಶೀಟರ್ ಚೈಲ್ಡ್ ರವಿಯನ್ನು ದುಷ್ಕರ್ಮಿಗಳು ಇಂದು ಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ನಡೆದಿದೆ.

ಕುಡಿಯುವ ನೀರು ತರಲೆಂದು ದ್ವಿ ಚಕ್ರ ವಾಹನದಲ್ಲಿ ಹೊರಟಿದ್ದ ರವಿಯನ್ನು ಹಿಂದಿನಿಂದ ವಾಹನ ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದಾಳಿ ನಡೆಸಿದ ಇಬ್ಬರು ದುಷ್ಕರ್ಮಿಗಳ ಮಾರಕಾಸ್ತ್ರಗಳ ದಾಳಿಯಿಂದ ರವಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *