ಸಕಲೇಶಪುರ : ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಇಂದು ಪುರಸಭೆಯ ವತಿಯಿಂದ ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನದ ದೊಡ್ಡಕೆರೆ ಆವರಣದಲ್ಲಿ ಉಪವಿಭಾಗಾಧಿಕಾರಿ ಡಾ.ಶೃತಿ ಅವರು ಗಿಡನೆಡುವ ಮೂಲಕ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಶೃತಿ ಮಾತನಾಡಿ ಹವಾಮಾನದ ವೈಪರೀತ್ಯದಿಂದ ಇಂದು ಕಾಲ ಕಾಲಕ್ಕೆ ಮಳೆ ಬಾರದೆ ನಾವು ಇಂದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಅಭಿವೃದ್ದಿ ಯೋಜನೆಯ ಹೆಸರಿನಲ್ಲಿ ಆದುನಿಕವಾಗಿ ಇಂದು ನಾವುಗಳು ಪರಿಸರವನ್ನು ಮರೆಯುತ್ತಿದ್ದು ಪರಿಸರ ನಾಶದಿಂದ ಸರಿಯಾದ ಕಾಲಕ್ಕೆ ಮಳೆಬಾರದೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಕಲೇಶಪುರದಂತ ಮಲೆನಾಡು ಭಾಗದಲ್ಲಿ ಕಳೆದ ಎರಡು ವರ್ಷಗಳಿಂದ ಸರಿಯಾಗಿ ಮಳೆ ಬಾರದೆ ಇರುವುದು ಹವಾಮಾನದ ಬದಲಾವಣೆಯಿಂದಾಗಿ ಹಾಗಾಗಿ ಪ್ರತಿಯೊಬ್ಬ ನಾಗರೀಕರು ತಮ್ಮ ಮನೆಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಪಟ್ಟಣದ ರಸ್ತೆ ಬದಿಗಳಿಗೆ ಹಾಕುವುದು ,ಎಲ್ಲೆಂದರಲ್ಲಿ ಹಾಕುವುದರಿಂದ ಪರಿಸರಕ್ಕೆ ಹಾನಿಕಾರವಾಗಿದ್ದು ಮತ್ತೊಂದು ಕಡೆ ನಮ್ಮ ಆರೋಗ್ಯದ ಬಗ್ಗೆಯೂ ಕೂಡ ಪರಿಣಾಮ ಬೀರುವ ಸಾಧ್ಯತೆಗಳಿದ್ದು ತಮ್ಮ ಮನೆಗಳಲ್ಲಿ ಸಂಗ್ರಹವಾಗುವ ಘನತ್ಯಾಜ್ಯವನ್ನು ಒಂದು ಕಡೆ ಶೇಖರಿಸಿ ಮನೆಯಲ್ಲಯೇ ಗೊಬ್ಬರವನ್ನು ತಯಾರಿಸಿ ತಾವು ಮನೆಗಳಲ್ಲಿ ಬೆಳೆಯುವ ಗಿಡಗಳಿಗೆ ಹಾಕುವುದರಿಂದ ಪಟ್ಟಣದಲ್ಲಿ ಉತ್ಪತ್ತಿಯಾಗುವ ಕಸವನ್ನು ಸ್ವಲ್ಪಮಟ್ಟಿಗೆ ತಡೆಗಟ್ಟಲು ಸಹಕಾರವಾಗುತ್ತದೆ ಎಂದರು.

ಪುರಸಭೆ ಮುಖ್ಯಾಧಿಕಾರಿ ರಮೇಶ್ ಮಾತನಾಡಿ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಇಂದು ಸಾಂಕೇತಿಕವಾಗಿ ದೊಡ್ಡಕೆರೆ ಆವರಣದಲ್ಲಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸಸಿಗಳನ್ನು ನೆಡಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಪ್ರತಿ ವಾರ್ಡುಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಸಾರ್ವಜನಿಕರಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಮುದಾಯ ಸಂಘಟನಾದ್ಇಕಾರಿ ನಟರಾಜು , ಇಂಜಿನೀಯರ್ ಸುಜಾತ ಹಿರಿಯ ಆರೋಗ್ಯಾದಿಕಾರಿ ನಿರೀಕ್ಷರಾದ ಸವಿತ ಪುರಸಭಾ ಸಿಬ್ಬಂದಿಗಳಾದ ಶ್ರೀನಿವಾಸ್, ಅನೀಲ್, ಇತರರು ಇದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *