
ಸಕಲೇಶಪುರ : ಮಲೆನಾಡು ವೀರಶೈವ ಸಮಾಜ ಮತ್ತು ಅಂಗಸಂಸ್ಥೆಗಳ ಸಹಯೋಗದಲ್ಲಿ ಜೂನ್ 13 ರ ಗುರುವಾರದಂದು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಅಶ್ವರೂಡ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಎಲ್ಲಾ ಸಮಾಜದ ಬಾಂಧವರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವೀರಶೈವ ಸಮಾಜದ ಮುಖಂಡರಾದ ಯೆಡೆಹಳ್ಳಿ ಆರ್ ಮಂಜುನಾಥ್ ಮನವಿ ಮಾಡಿದ್ದಾರೆ.
ಜೂನ್ 13 ರ ಬೆಳಗ್ಗೆ ಬಸವೇಶ್ವರರ ಭಾವಚಿತ್ರವನ್ನು ಬೆಳ್ಳಿಯ ರಥದ ಮೇಲೆ ಇಟ್ಟು ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ವಿವಿದ ಕಲಾ ತಂಡಗಳ ಮೆರವಣಿಗೆಯೊಂದಿಗೆ ಲೋಕಾರಗಪಣೆಗೊಳ್ಳಲು ಸಿದ್ದವಿರುವ ಅಶ್ವರೂಡ ಬಸವೇಶ್ವರರ ಕಂಚಿನ ಪ್ರತಿಮೆಯವರೆಗೆ ಮೆರವಣಿಗೆಯಲ್ಲಿ ಬರಲಾಗುವುದು
ನಂತರ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದ ಆವರಣದಲ್ಲಿ ಮದ್ಯಾಹ್ನ 1-30 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಸಭಾ ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಪರಮ ಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಮಿಗಳು,ಶ್ರೀ ಶ್ರೀ ಶಿರಾತ್ರಿದೇಶಿಕೇಂದ್ರಮಹಾಸ್ವಾಮಿಗಳು, ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ನವರು, ಕರ್ನಾಟಕ ಸರ್ಕಾರದ ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ ,ಮಾಜಿ ಲೋಕಸಭಾ ಸದಸ್ಯರಾದ ಜಿ.ಎಸ್.ಬಸವರಾಜು, ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್, ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಕೆ.ಸುರೇಶ್ ಹುಲ್ಲಹಳ್ಳಿ, ಮದ್ದೂರು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯಗೌಡ ಮಾಜಿ ಶಾಸಕರುಗಳಾದ ಬಿ.ಆರ್.ಗುರುದೇವ್, ಹೆಚ್.ಎಂ.ವಿಶ್ವನಾಥ್, ಹೆಚ್.ಕೆ.ಕುಮಾರಸ್ವಾಮಿ,ಜೆ.ಪ್ರೀತಂಗೌಡ, ಲಿಂಗೇಶ್ ಹಾಗೂ ಇನ್ನೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
