
ಬೇಲೂರು.ಜೂನ್.೧೫“ವಿದ್ಯಾರ್ಥಿಗಳಿಗೆ ಮನೋಬಲ ಹಾಗೂ ಆತ್ಮಸ್ಥೈರ್ಯ ಅವಶ್ಯ
ತಹಸೀಲ್ದಾರ್ ಎಂ.ಮಮತ ಕರೆ
ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಮನೋಬಲ ಹಾಗೂ ಆತ್ಮಸ್ಥೈರ್ಯಇಟ್ಟುಕೊಂಡರೆ ಖಂಡಿತ ಯಾವುದೇ ರೀತಿಯ ಸಾಧನೆ ಮಾಡಬಹುದು,ವಿದ್ಯಾರ್ಥಿಗಳು ಬದುಕಿನ ಗುರಿಯನ್ನು ಇಟ್ಟುಕೊಂಡು ಶ್ರಮವಹಿಸಿ, ಶ್ರೇದ್ದೆಯಿಂದ ಕಲಿತರೆ ಅವಕಾಶಗಳನ್ನು ನಿಮ್ಮದಾಗಿಸಿಕೊಳ್ಳಬಹುದು ಎಂದು ಬೇಲೂರು ತಹಸೀಲ್ದಾರ್ ಎಂ.ಮಮತ ಕರೆ ನೀಡಿದರು.
ಪಟ್ಟಣದ ಬಸ್ ನಿಲ್ದಾಣ ಮುಂಭಾಗದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡ ಸಾಹಿತಿ ಹಾಗೂ ಮಹಿಳಾ ಪರ ಹೋರಾಟಗಾರ್ತಿ ಡಾ.ವಿಜಯದಬ್ಬೆ ಅವರ ಜನ್ಮದಿನ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ ನಡೆಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪಠ್ಯದ ಜೊತೆ-ಜೊತೆಗೆ ಶಾಲಾ ಕಾಲೇಜುಗಳಲ್ಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಅವಕಾಶಗಳನ್ನು ಸದ್ಬಳಿಕೆ ಮಾಡಿಕೊಳ್ಳಬೇಕು.
ವಿಶೇಷವಾಗಿ ಪ್ರತಿ ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಿದೆ. ಇದ್ದರಿಂದ ಶೈಕ್ಷಣಿಕ ಕಾರ್ಯಕ್ಷಮತೆದೊಂದಿಗೆ ಆತ್ಮಬಲಕ್ಕೆ ಪೂರಕವಾಗುತ್ತದೆ ಎಂದ ಅವರು ಬೇಲೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಿಜಕ್ಕೂ ಅಗಮ್ಯವಾಗಿದೆ ಎಂದು ಹರ್ಷ ವ್ಯಕ್ತ ಪಡಿಸಿದರು.
ತಾಲ್ಲೂಕು ಕಸಾಪ ಗೌರವ ಕಾರ್ಯದರ್ಶಿ ಬಿ.ಬಿ.ಶಿವರಾಜ್ ಮಾತನಾಡಿ, ಕಳೆದ ನಾಲ್ಕು ದಶಕಗಳಿಂದ ಬೇಲೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಲೆ,ನೃತ್ಯ,ಸಂಗೀತ, ಸಾಹಿತ್ಯ, ಜಾನಪದ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ಅದ್ವಿತೀಯ ಕೆಲಸದೊಂದಿಗೆ ಎಲೆಮರೆಯಲ್ಲಿನ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿದೆ. ಅಂತಯೇ ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಕನ್ನಡ ಭಾಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನಡೆಸುತ್ತಾ ಬಂದಿದೆ.
ಪ್ರಸಕ್ತ ವರ್ಷದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಸಾಹಿತ್ಯ ಪರಿಷತ್ತಿಗೆ ಶಾಶ್ವತವಾದ ನಿವೇಶನ ಮತ್ತು ಕಟ್ಟಡ ಇಲ್ಲದಿರುವುದು ನಿಜಕ್ಕೂ ಶೋಚನೀಯವಾಗಿದೆ. ಹೇಳಿ ಕೇಳಿ ಬೇಲೂರು ಶಿಲ್ಪಕಲೆಗಳ ನಾಡಿನಲ್ಲಿ ಕಲಾಮಂದಿರ ಇಲ್ಲದೆ ರಂಗಭೂಮಿ ಚಟುವಟಿಕೆಗಳು ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಸಂಬಂಧ ಪಟ್ಟವರು ಹೆಚ್ಚಿನ ಗಮನ ನೀಡಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಬಿ.ಎಲ್.ರಾಜೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್, ಪ್ರಾಂಶುಪಾಲ ಹರೀಶ್, ಕಾಫಿ ಬೆಳೆಗಾರ ನಾಗರಾಜ್, ಸಾಹಿತಿ ಹೆಚ್.ಕೆ.ಮಹೇಶ್ ಭರದ್ವಾಜ್, ಸಾಹಿತಿ ಇಂದಿರಮ್ಮ, ಕಸಾಪ ಮಾಜಿ ಅಧ್ಯಕ್ಷ ಮ.ಶಿವಮೂರ್ತಿ, ಆರ್.ಎಸ್.ಮಹೇಶ್, ಮಾ.ನ.ಮಂಜೇಗೌಡ, ಬೊಮ್ಮಡಿಹಳ್ಳಿ ಕುಮಾರಸ್ವಾಮಿ, ಹೋಬಳಿ ಅಧ್ಯಕ್ಷರಾದ ಕಮಲಚನ್ನಪ್ಪ, ಚನ್ನೇಗೌಡ, ಸೋಮನಾಥ್ ಹಾಸನ ಕಸಾಪ ಗೌರವಾಧ್ಯಕ್ಷ ಜಾವಗಲ್ ಪ್ರಸನ್ನ ಧರ್ಮ ಪ್ರಕೃತಿ. ಸಂಪತ್. ಸೇರಿದಂತೆ ಇನ್ನು ಮುಂತಾದವರು ಹಾಜರಿದ್ದರು.
ಬಾಕ್ಸ್ ನ್ಯೂಸ್ ;-ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಕೆಲ ಪ್ರತಿಭಾವಂತ ವಿದ್ಯಾರ್ಥಿಗಳು ಪೋಷಕರ ಸಹಕಾರವಿಲ್ಲದೆ ಬೇಕರಿ ಇನ್ನಿತರ ಕಡೆ ಮುಖ ಮಾಡುತ್ತಿರುವುದು ನಿಜಕ್ಕೂ ಶೋಚನೀಯವಾಗಿದೆ. ಈ ಕಾರಣದಿಂದ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ರಾಹ ನೀಡಬೇಕು ಅಲ್ಲದೆ ಈ ಬಾರಿ ನಮ್ಮ ತಾಲೂಕು ನಮ್ಮ ಶಿಕ್ಷಕರ ಬಳಗ ಹಾಗೂ ವಿದ್ಯಾರ್ಥಿಗಳ ಸಹಕಾರ ಮತ್ತು ಪೋಷಕರ ಸಹಾಯದಿಂದ ಎಸ್ ಎಸ್ ಎಲ್ ಸಿ ಯಲ್ಲಿ ಮೂರನೇ ಸ್ಥಾನವನ್ನು ಪಡೆದಿದ್ದು ಮುಂದಿನ ವರ್ಷದ ಮುಂದಿನ ವರ್ಷ ಮೊದಲನೇ ಸ್ಥಾನವನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ . ಎಂದು ಬೇಲೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಹೇಳಿದರು.
