ಸಕಲೇಶಪುರ :-ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿಯ ಶುದ್ಧ ಕುಡಿಯುವ ನೀರಿನ ಘಟಕ ಕಳೆದ ಆರು ತಿಂಗಳಿಂದ ಕೆಟ್ಟು ನಿಂತಿದ್ದು ಸ್ಥಳೀಯರಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.

ಬ್ಯಾಕರವಳ್ಳಿ ಸರ್ಕಲ್ ನಲ್ಲಿ ನಿರ್ಮಿಸಿರುವ ಈ ಶುದ್ಧ ನೀರಿನ ಘಟಕವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರಿಗೆ ಹಾಗೂ ಈ ಭಾಗಕ್ಕೆ ಬರುವ ಪ್ರವಾಸಿಗರಿಗೆ, ಕಾರ್ಮಿಕರಿಗೆ ಹಾಗೂ ವಾಹನ ಚಾಲಕರಿಗೆ ಕುಡಿಯುವ ಶುದ್ಧ ನೀರಿನ ವ್ಯವಸ್ಥೆಯ ಅನುಕೂಲವಾಗುತ್ತಿತ್ತು.

ಈಗಾ ಸುಮಾರು ಆರು ತಿಂಗಳಿಂದ ಕೆಟ್ಟು ನಿಂತಿರುವ ಈ ಶುದ್ಧ ನೀರಿನ ಘಟಕದ ಬಗ್ಗೆ ಬ್ಯಾಕರವಳ್ಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಂಗನಾಥ್ ಶೆಟ್ಟಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ದರ್ಶನ್ ಅವರ ಗಮನಕ್ಕೆ ಸ್ಥಳೀಯರು ಹಲವು ಬಾರಿ ಸಮಸ್ಯೆಯ ಬಗ್ಗೆ ಹೇಳಿದರು ಕೂಡ ಯಾರು ಇದರ ಬಗ್ಗೆ ಗಮನ ಹರಿಸುತ್ತಿಲ್ಲ.

ಇದರಿಂದ ಜನರಿಗೆ ಶುದ್ಧ ನೀರು ಮರಿಚಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೋರಾಟ ಮಾಡಲಾಗುತ್ತದೆ.

ವಸಂತ್ ಬೊಮ್ಮನಕೆರೆ ಮಧು ಬೊಮ್ಮನಕೆರೆ ಆಕ್ರೋಶ ವ್ಯಕ್ತಪಡಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *