ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಜುಲೈ ೧ ರಿಂದ ಅಗ್ಗದ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.

ಉಚಿತ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿರುವ ಸರ್ಕಾರ, ದೇಶಿಯ ಮದ್ಯಗಳ ಬೆಲೆ ಏರಿಕೆಗೆ ನಿರ್ಧರಿಸಿದ್ದು, ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿದ್ದು, ಶೀಘ್ರವೇ ಅನುಮೋದನೆ ನೀಡಲು ಮುಂದಾಗಿದೆ.

ಅಗ್ಗದ ಮದ್ಯದ ಬ್ರ್ಯಾಂಡ್‌ಗಳ ಬೆಲೆಗಳನ್ನು ಹೆಚ್ಚಿಸಲು ಚಿಂತಿಸಲಾಗುತ್ತಿದೆ. ಆದರೆ, ಹೆಚ್ಚು ದುಬಾರಿ ಬ್ರ್ಯಾಂಡ್‌ಗಳು ಬೇರೆಡೆ ದರಗಳೊಂದಿಗೆ ಹೊಂದಾಣಿಕೆ ಮಾಡಲು ಬೆಲೆ ಇಳಿಕೆ ಮಾಡಲಾಗುತ್ತದೆ.

ಅರೆ ಪ್ರೀಮಿಯಂ ಮದ್ಯಗಳು ಶೇಕಡಾ 10 ರಷ್ಟು ಕಡಿತವನ್ನು ಕಾಣಬಹುದು. ಹಾಗೆಯೇ ಪ್ರೀಮಿಯಂ ವಿದೇಶಿ ಬ್ರಾಂಡ್‌ಗಳ ಬೆಲೆಗಳು ಶೇಕಡಾ 12 ರಿಂದ 15 ರಷ್ಟು ಕಡಿಮೆಯಾಗಬಹುದು.ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು.

ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು.

ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು.

ಈಗ ಮತ್ತೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *