ಕೆಪಿಎಸ್ ಹೆತ್ತೂರು; ಯೋಗ ದಿನಾಚರಣೆ ಪ್ರಯುಕ್ತ ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹತ್ತನೇ ಅಂತರಾಷ್ಟ್ರೀಯ ಯೋಗ ದಿನವನ್ನು ಸಾಮೂಹಿಕ ಯೋಗಾಭ್ಯಾಸದ ಮೂಲಕ ಆಚರಿಸಲಾಯಿತು.

ಹೆತ್ತೂರಿನ ಹವ್ಯಾಸಿ ಯೋಗ ಪಟು, 74ವರ್ಷದ ಶ್ರೀಮತಿ ಜಾಜಮ್ಮ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ಪ್ರಾತ್ಯಕ್ಷಿಕೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ, ಪ್ರಾಂಶುಪಾಲ ಮಂಜುನಾಥ ಬಿ.ಡಿ. ಉಪಪ್ರಾಂಶುಪಾಲ ಭಾಸ್ಕರ ಬಿ. ಮುಖ್ಯೋಪಾಧ್ಯಾಯ ಸತೀಶ್ ಹೆಚ್.ಕೆ,ಶಾಲಾಭಿವೃದ್ದಿ ಸಮಿತಿಯ ಸದಸ್ಯರು, ಉಪನ್ಯಾಸಕ, ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಹರೀಶ್ ಕರಡಿಗಾಲ ಯೋಗದ ಮಹತ್ವದ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಜಾಜಮ್ಮ ಮತ್ತು ಪುಟ್ಟಸ್ವಾಮಿ ಗೌಡ ದಂಪತಿಗಳನ್ನು ಸನ್ಮಾನಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *