
ಸಕಲೇಶಪುರ:- ಸಕಲೇಶಪುರ ತಾಲ್ಲೂಕು ಕುರಬತ್ತೂರು ಗ್ರಾಮಪಂಚಾಯಿತಿಯ ಶುಕ್ರವಾರ ಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇಂದು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗಾಸನವನ್ನು ಮಾಡುವ ಮೂಲಕ ಅರ್ಥಪೂರ್ಣ ಯೋಗ ದಿನಾಚರಣೆ ಆಚರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ಶಿಕ್ಷಕರು ವಿವರಿಸಿದರು.
ಇದರೊಂದಿಗೆ ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.




