
ಸಕಲೇಶಪುರ .ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಪರಿಶಿಷ್ಟ ಜಾತಿ, ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ 2022-23/ 2023-24 ಸಾಲಿನ ತಾಲೂಕು ಮಟ್ಟದ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಎಸ್. ಎಸ್. ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮನೆಡೆಯಿತು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿಲಾಯಿತು. ಇದೇ ವೇಳೆ ನೀಡುತ್ತಾ ರಾಜ್ಯ ಸರ್ಕಾರಿ ನೌಕರರನ್ನು ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಶಾಸಕರಾದ ಸಿಮೆಂಟ್ ಮಂಜು, ಕಾಂಗ್ರೆಸ್ ಮುಖಂಡ ಮುರುಳಿಮೋಹನ್, ಮೂಡಿಗೆರೆ ಮಾಜಿ ಶಾಸಕ ಕುಮಾರಸ್ವಾಮಿ, ಆನಂದ್ ಮೂರ್ತಿ, ತಾಲ್ಲೂಕು ಪರಿಶಿಷ್ಟ ಜಾತಿ, ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಎಸ್ ಮಹೇಶ್, ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾದ ಎಚ್.ಎಸ್ ಕರುಣಾಕರ್, ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ವಿನಯ್ ಕುಮಾರ್, ವಲಯ ಅರಣ್ಯಾಧಿಕಾರಿ ಶಿಲ್ಪಾ, ಕಾರವಾರ ಕೃಷಿ ಅಧಿಕಾರಿ ಯು.ಎಂ ಪ್ರಕಾಶ್, ನಿವೃತ್ತ ಮುಖ್ಯ ಶಿಕ್ಷಕ ಗುದ್ದು ಲಕ್ಕಪ್ಪ, ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಆರ್ ಕೊಮಾರಾಯ್ಯ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.







