
ಹಾಸನ: ಪಕ್ಷದ ಕಾರ್ಯಕರ್ತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ವಿಚಾರಣೆಗಾಗಿ ಸಿಇಎನ್ ಠಾಣೆಗೆ ಕರೆಯಿಸಿ ನಂತರ ಬಂಧಿಸಿ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
ಈಗ ಸಂತ್ರಸ್ತನ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ನಂತರ ಯಾವುದೇ ಕ್ಷಣದಲ್ಲಿ ಅವರ ಬಂಧನವಾಗುವ ಸಾಧ್ಯತೆಯಿದೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.
ರಾತ್ರಿ ೭.೩೦ರ ಸಮಯದಲ್ಲಿ ಸಿಇಎನ್ ಪೊಲೀಸ್ ಠಾಣೆಗೆ ಡಾ. ಸೂರಜ್‌ರೇವಣ್ಣ ಅವರನ್ನು ಕರೆ ತಂದಿದ್ದ ಪೊಲೀಸರು ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.
ಪೊಲೀಸ್ ಠಾಣೆಗೆ ಹಾಸನ ಜಿಲ್ಲಾ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಚರ್ಚಿಸಿದ ನಂತರ ಅಧಿಕಾರಿಗಳಿಗೆ ಸೂಚನೆ ನೀಡಿ ತೆರಳಿದ್ದರು.
ಮತ್ತೊಂದೆಡೆ ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.
ವರದಿ ದೊರಕಿದ ನಂತರ ಅವರನ್ನು ಬಂಧಿಸುವ ಸಾಧ್ಯತೆ ಇದೆ. ನಿನ್ನೆ ರಾತ್ರಿಯಿಂದ ಸಿಇಎನ್ ಠಾಣೆಯಲ್ಲಿ ಸೂರಜ್ ಅವರನ್ನು ವಿಚಾರಣೆಗೊಳಪಡಿಸಿದ್ದ ತನಿಖಾಧಿಕಾರಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಆರೋಪಿಯನ್ನು ಬಂಧಿಸಿದ್ದಾರೆ.
ಮಧ್ಯಾಹ್ನದ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. ಒಂದೆಡೆ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿರುವಾಗಲೇ ಅವರ ಅಣ್ಣ ಡಾ. ಸೂರಜ್ ಬಂಧನವಾಗಿದ್ದು, ರೇವಣ್ಣ ಇಬ್ಬರು ಪುತ್ರರೂ ಗಂಭೀರ ಅಪರಾಧ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರುವಂತಾಗಿದೆ.
ಮಾಜಿ ಸಚಿವರ ಪುತ್ರ ಆಗಿರುವುದರಿಂದ ಪೊಲೀಸ್ ಠಾಣೆ ಸುತ್ತಾ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪೊಲೀಸ್ ಠಾಣೆ ಬಳಿ ಸೂರಜ್ ಅವರ ಶಿಫ್ಟ್ ಕಾರು ಇದ್ದು, ಸೆಷೆನ್ಸ್ ಕೋರ್ಟ್ ಗೆ ಪ್ರಕರಣ ವರ್ಗ ಸಾಧ್ಯತೆ ಇದೆ.
ನಗರದ ಎನ್.ಆರ್. ವೃತ್ತದ ಬಳಿ ಇರುವ ಸೆನ್ ಠಾಣೆಗೆ ಸೂರಜ್ ನನ್ನು ವಾಪಸ್ ಕರೆ ತಂದಿರುವ ಪೊಲೀಸರು ಠಾಣೆಗೆ ಬಂದ ಸೂರಜ್ ಪರ ವಕೀಲ ಪೂರ್ಣಚಂದ್ರ ಕೆಲ ಸಮಯ ಚರ್ಚೆ ನಡೆಸಿದರು.
ಲೋಕಸಭಾ ಚುನಾವಣೆ ಪ್ರಚಾರದ ನಂತರ ಮತದಾನ ನಡೆಯುವ ನಾಲ್ಕು ದಿನಗಳು ಇರುವಂತೆ ಮೊದಲು ಮೈತ್ರಿ ಅಭ್ಯರ್ಥಿ ಆಗಿದ್ದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋ ಹರಡಿದ ಆರೋಪ ಕೇಳಿ ಬರುತ್ತಿದ್ದಂತೆ ಪ್ರಜ್ವಲ್ ದೇಶ ಬಿಟ್ಟು ಜರ್ಮನಿ ಹಾರಿದ್ದರು. ನಂತರ ಮತ್ತೆ ವಾಪಸ್ ಬಂದು ಜೈಲು ವಾಸ ಅನುಭವಿಸುತ್ತಿದ್ದಾರೆ.
ಇನ್ನು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧವೂ ಕೂಡ ಕೇಸು ದಾಖಲಾಗಿದ್ದು, ಇದಾದ ನಂತರ ಜಿಲ್ಲಾ ಪಂಚಾಯತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಭವಾನಿ ರೇವನ್ಣರವರ ಮೇಲೂ ಕೇಸು ದಾಖಲಾಗಿದ್ದು, ಈಗ ಹೊಸ ವಿಚಾರ ಎಂಬಂತೆ ವಿಧಾನ ಪರಿಷತ್ತು ಸದಸ್ಯ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮಕ್ಕೆ ಒಳಗಾಗಿರುವ ಸಂತ್ರಸ್ತ ದೂರಿನ ಮೇರೆಗೆ ಸೂರಜ್ ಅವರನ್ನು ಕೂಡ ಬಂಧಿಸಿ ಮೆಡಿಕಲ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಒಟ್ಟಾರೆ ಇಡೀ ಒಮದು ಕುಟುಂಬಕ್ಕೆ ಕಂಟಕ ಎಂಬಂತೆ ಆರೋಪ ಎದುರಿಸುತ್ತಿದ್ದಾರೆ. ಮುಂದೆ ಏನಾಗುವುದು ಕಾದು ನೋಡಬೇಕಾಗಿದೆ.
