ಮತ್ತೆ ಅಧಿಕಾರ ಸೂತ್ರದ ಚರ್ಚೆ: ಎಂ.ಬಿ ಪಾಟೀಲ್ ಹೇಳಿಕೆಗೆ ಹೈಕಮಾಂಡ್ ಆಕ್ಷೇಪ.ಐದು ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಇರಲಿದ್ದಾರೆ ಎಂಬ ಎಂ.ಬಿ ಪಾಟೀಲ್ ಹೇಳಿಕೆಗೆ ಕಾಂಗ್ರೆಸ್ ಹೈಕಮಾಂಡ್ ಆಕ್ಷೇಪ ವ್ಯಕ್ತಪಡಿಸಿದೆ. ಅಧಿಕಾರ ಸೂತ್ರದ ಕುರಿತು ಯಾರೂ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದೆ.ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಂ.ಬಿ ಪಾಟೀಲ್, “ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಪಕ್ಷದ ವರಿಷ್ಠರು ಏನು ಹೇಳಿದ್ದಾರೋ ಅದನ್ನು ನಾನು ಹೇಳಿದ್ದೇನೆ” ಎಂದರು.“ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂಬುದನ್ನು ಎಐಸಿಸಿ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಮುಂದುವರಿಯುತ್ತಾರೆ ಎಂದಿದ್ದರು. ಅದನ್ನೂ ನಾನು ಹೇಳಿದ್ದೇನೆ” ಎಂದರು.ಈ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್ “ಅಧಿಕಾರ ಸೂತ್ರದ ಬಗ್ಗೆ ಕೆಲಸ ಮಾಡಲು ಎಐಸಿಸಿ ಇದೆ. ರಾಜ್ಯದ ಸರ್ವತೋಮುಖ ಅಭಿವೃದ್ದಿಯಷ್ಟೇ ನಮ್ಮ ಆದ್ಯತೆ” ಎಂದಿದ್ದಾರೆ.ಯಾರೂ ಕೂಡ ಅನಗತ್ಯ ಹೇಳಿಕೆ ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೆ ನಮ್ಮ ಗುರಿ. ಅನಗತ್ಯ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಬೇಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಾಂಗ್ರೆಸ್ ಶಾಸಕರು ಮತ್ತು ಸಚಿವರಿಗೆ ಸೂಚನೆ ನೀಡಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *