ಚನ್ನರಾಯಪಟ್ಟಣ: ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಏರ್ಪಡಿಸಿದ ನಾಡಪ್ರಭು ಕೆಂಪೇಗೌಡರ 515ನೇ ಜನುಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಗಾರರಾಗಿ ಭಾಗವಹಿಸಿದ್ದ ಅಳಿಸಂದ್ರ ಶ್ರೀನಿವಾಸ್ ಕೆಂಪೇಗೌಡ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು ದೇಶದ ಭವಿಷ್ಯದ ಪ್ರಜೆಗಳಾಗಿರುವ ಯುವಕರು ಕೆಂಪೇಗೌಡರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ದೇಶ ಸೇವೆಗೆ ಶ್ರಮಿಸುವಂತೆ ಕರೆ ನೀಡಿದರು.
ಬೆಂದಕಾಳೂರು ಎಂಬ ಊರನ್ನು ಪ್ರಪಂಚದಲ್ಲಿರುವ ದೊಡ್ಡ ನಗರಗಳಲ್ಲಿ ಬೆಂಗಳೂರು ಬೃಹತ್ ಪ್ರಮಾಣದಲ್ಲಿ ಬೆಳೆದಿರುವುದು ಅದಕ್ಕೆ ಕೆಂಪೇಗೌಡರ ದೂರದೃಷ್ಟಿಯ ಫಲವಾಗಿದೆ
ಕೆಂಪೇಗೌಡರು ಒಂದು ಜಾತಿಯ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ ಪ್ರತಿಯೊಂದು ಸಮುದಾಯದ ಪರವಾಗಿ ಕೆಲಸ ಮಾಡಿದ ರಾಜರಾಗಿದ್ದಾರೆ ಅಂದೇ ಬೆಂಗಳೂರಿನಲ್ಲಿ ಪ್ರತಿಯೊಂದು ಸಮುದಾಯಕ್ಕೆ ಒಂದೊಂದು ಪೇಟೆಗಳನ್ನು ನಿರ್ಮಾಣ ಮಾಡಿದ್ದರು ಇಂದು ಹಳ್ಳಿಗಳಿಂದ ಬೆಂಗಳೂರಿಗೆ ಯುವಕರು ಉದ್ಯೋಗವನ್ನು ಅರಸಿಕೊಂಡು ವಲಸೆ ಹೋಗುತ್ತಿದ್ದಾರೆ ಎಂದರೆ ಬೆಂಗಳೂರು ನಗರ ಆಕರ್ಷಣೆ ಯಾಗಿದೆ ಎಂದರೆ ಅದಕ್ಕೆ ಕೆಂಪೇಗೌಡರ ಕಾಲದಲ್ಲಿ ನಗರ ನಿರ್ಮಾಣ ಕಾರ್ಯದಲ್ಲಿ ಕೈಗೊಂಡಿರುವ ಯೋಜನೆಗಳೇ ಸಾಕ್ಷಿಯಾಗಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಸಿಎನ್ ಬಾಲಕೃಷ್ಣ, ತಾಲೂಕು ದಂಡಾಧಿಕಾರಿ ಬಿಎಂ ಗೋವಿಂದರಾಜು, ತಾಲೂಕು ಪಂಚಾಯಿತಿ ಇ ಓ ಹರೀಶ್, ಪುರಸಭೆ ಮುಖ್ಯ ಅಧಿಕಾರಿ ಹೇಮಂತ್, ಡಿವೈಎಸ್ಪಿ ರವಿಪ್ರಸಾದ್, ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕಾಳೆನಹಳ್ಳಿ ಆನಂದ್, ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಸಿಎನ್ ಅಶೋಕ್,ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಚ್ಎನ್ ಲೋಕೇಶ್, ಟಿಎಪಿಎಂಎಸ್ನ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ, ಒಕ್ಕಲಿಗರ ಸಂಘದ ಅಧ್ಯಕ್ಷರಾದ ಜೈಪಾಲ್, ಕನ್ನಡಪರ ಹೋರಾಟಗಾರರಾದ ಭರತ್ ಗೌಡ, ಜನಿವಾರ ಶರತ್, ಗನ್ನಿ ಅಪ್ಪಿ, ಪ್ರೇಮ್ ,ಸೇರಿದಂತೆ ಇತರರು ಹಾಜರಿದ್ದರು.