ಹಾಸನ: ನಾಡಪ್ರಭು ಕಂಪೇಗೌಡರ ಜಯಂತಿ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಗುರುವಾರ ಬೆಳಿಗ್ಗೆ ಆಕರ್ಷಕ ಮೆರವಣಿಗೆಗೆ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹಾಗೂ ಇತರರು ಚಾಲನೆ ನೀಡಿದರು.
ಮೊದಲು ಬೆಳ್ಳಿ ಸಾರೋಟದಲ್ಲಿ ಇಡಲಾಗಿದ್ದ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಫಾರ್ಚನೆ ನಡೆಸಿದರು. ನಂತರ ಡೋಲು ಭಾರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.
ಇದೆ ವೇಳೆ ಕೇಂಪೆಗೌಡರ ವೇಷದಾರಿ, ದೇವರ ವೇಷ ಧರಿಸಿದ ಯುವತಿಯರಿಂದ ಕುಣಿತ, ಬೆದರುಬೊಂಬೆ, ನಂದಿಕುಣಿತ, ಕಾಲೇಜು ವಿದ್ಯಾರ್ಥಿಗಳ ಸಾಲು, ಡೋಲು ಬಾರಿಸುವುದು, ಡಿಜೆ ಸೌಂಡ್ ಸೇರಿದಂತೆ ವಿವಿಧ ಕಲಾತಂಡಗಳು ಭಾಗವಹಿಸಿದ್ದವು.
ನಗರದ ಎಂ.ಜಿ. ರಸ್ತೆ ಬಳಿ ಇರುವ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಿಂದ ಮೆರವಣಿಗೆ ಪ್ರಾರಂಭವಾಯಿತು
ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಮೆರವಣಿಗೆಗೆ ಚಾಲನೆ ನೀಡಿದ ನಂತರ ಬಿ.ಎಂ. ರಸ್ತೆ, ಎನ್.ಆರ್. ವೃತ್ತ, ಮಹಾವೀರ ವೃತ್ತದ ಮೂಲಕ ಹಾಸನಾಂಬ ಕಲಾಕ್ಷೇತ್ರದವರೆಗೂ ಮೆರವಣಿಗೆ ಸಾಗಿತು.
ಇದೆ ವೇಳೆ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್, ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ಧೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್ ಮಹಮ್ಮದ್ ಸುಜೀತ, ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕರಾದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ಎಸ್. ರಘುಗೌಡ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಹೆಚ್.ಪಿ. ತಾರನಾಥ್, ಕಸಾಪ ಜಿಲ್ಲಾಧ್ಯಕ್ಷ ಹೆಚ್.ಎಲ್. ಮಲ್ಲೇಶ್ ಗೌಡ, ಮಾಜಿ ಅಧ್ಯಕ್ಷ ಹೆಚ್.ಬಿ. ಮದನ್ ಗೌಡ ಇತರರು ಭಾಗವಹಿಸಿದ್ದರು.