ಬೆಂಗಳೂರು : ಮೇ 23- ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 12 ರಿಂದ ಜೂನ್ 19ರ ವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.ಜೂನ್ 12ರಂದು ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ನಡೆಯಲಿದ್ದು, 13 ರಂದು ಕೋರ್ ವಿಷಯಗಳಾದ ವಿಜ್ಞಾನ ಮತ್ತು ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ ವಿಷಯಗಳ ಪರೀಕ್ಷೆ ನಡೆಯಲಿದೆ, ಜೂನ್ 14ರ ಬುಧವಾರ ದ್ವಿತೀಯ ಭಾಷೆ ಇಂಗ್ಲಿಷ್ ವಿಷಯದ ಪರೀಕ್ಷೆ ನಡೆಯಲಿದೆ.ಜೂನ್ 15ರಂದು ಕೋರ್ ವಿಷಯವಾದ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದ್ದು, ಜೂನ್ 16ರಂದು ಹಿಂದಿ ವಿಷಯದ ಪರೀಕ್ಷೆ ನಡೆಯಲಿದೆ. ಜೂನ್ 17ರಂದು ಕೋರ್ ವಿಷಯಗಳಾದ ಗಣಿತ ಮತ್ತು ಸಮಾಜಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ, ಜೂನ್ 19ರಂದು ಅರ್ಥಶಾಸ್ತ್ರ ಸೇರಿದಂತೆ ಇತರ ಕೋರ್ ವಿಷಯಗಳ ಪರೀಕ್ಷೆ ನಡೆಯಲಿದೆ.ಜೂನ್ 12 ರಿಂದ ಟಿಟಿಐಎ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರತಿ ದಿನ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:45 ರವರೆಗೆ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆಯ ಪ್ರಾರಂಭದಲ್ಲಿ ನೀಡಲಾಗುತ್ತದೆ ಪುನರಾವರ್ತಿತ ಶಾಲಾ ಅಭ್ಯರ್ಥಿ ಹಾಗು ಖಾಸಗಿ ಪುನರಾ ವರ್ತಿತ ಅಭ್ಯರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *