
ಬೇಲೂರು. ಜೂನ್.೨೯”ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಹಲಗಲಿ ಕನ್ನಡಿಗರ ಹೋರಾಟ ಅಗಮ್ಯ”
ಬ್ರಿಟಿಷರ ವಿರುದ್ಧ ತೊಡೆತಟ್ಟಿ, ದೇಶದಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿ, ಸ್ವಾಭಿಮಾನದ ಪ್ರತೀಕವಾದವರು ನಾಡಿನ ಹಲಗಲಿ ಬೇಡರಾಗಿದ್ದಾರೆ ಎಂದು ಬೇಲೂರು ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ವೈ.ಡಿ.ಲೋಕೇಶ್ ಹೇಳಿದರು.
ಪಟ್ಟಣದ ಪೂರ್ಣಪ್ರಜ್ಞ ವಿದ್ಯಾ ಕೇಂದ್ರದ ಸಭಾಂಗಣದಲ್ಲಿ ತಾಲ್ಲೂಕು ಜಾನಪದ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡ ಹಲಗಲಿ ಜನಪದ ಸಾಹಿತ್ಯ ಎಂಬ ಸಮಾರಂಭ ಕಾರ್ಯಕ್ರಮ ಉದ್ಘಾಟನೆ ನಡೆಸಿ ಮಾತನಾಡಿದ ಅವರು ಸಿಪಾಯಿ ದಂಗೆ ಇತಿಹಾಸ ಪುಟಗಳಲ್ಲಿ ದಾಖಲಾಗಿರುವ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚು ಹೊತ್ತಿದ್ದ ವೇಳೆಗೆ ಇಂದಿನ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಹಲಗಲಿ ಗ್ರಾಮದ ಬೇಡರು ಬ್ರಿಟಿಷರ ನಿದ್ದೆಗೆಡಿಸಿದ ವೀರ ಕನ್ನಡಿಗರು. ಬ್ರಿಟಿಷರು ಜಾರಿಗೆ ತಂದಿದ್ದ ನಿಶಸ್ತ್ರೀಕರಣ ಕಾನೂನಿನ ವಿರುದ್ಧ ಸೆಡ್ಡು ಹೊಡೆದು ನಿಂತ ಕನ್ನಡ ನೆಲೆದ ಹಲಗಲಿ ಬೇಡರು ಸ್ಮರಣೀಯರು ಎಂದ ಅವರು ಇಂತಹ ಅಪರೂಪದ ಮಾಹನ್ ವ್ಯಕ್ತಿಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿಟ್ಟಿನಲ್ಲಿ ತಾಲ್ಲೂಕು ಜಾನಪದ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಕೆಲಸ ನಿಜಕ್ಕೂ ಅನನ್ಯವಾಗಿದೆ. ಇಲ್ಲಿನ ಅಧ್ಯಕ್ಷರಾದ ವೈ.ಸಿ.ಸಿದ್ದೇಗೌಡ ಮತ್ತು ಕಾರ್ಯದರ್ಶಿ ಉಪನ್ಯಾಸಕ ಧನಂಜಯ ಅವರು ನಿರಂತರ ಕಾರ್ಯಕ್ರಮ ನಡೆಸುತ್ತಿದ್ದಾರೆ ಮುಂದಿನ ದಿನದಂದು ಇನ್ನೂ ಹೆಚ್ಚಿನ ಜನಪರ ಕೆಲಸಗಳನ್ನು ಮಾಡಲಿ ಎಂದು ಹೇಳಿದರು.
ತಾಲ್ಲೂಕು ಜಾನಪದ ಸಾಹಿತ್ಯ ಪರಿಷತ್ತು ಅಧ್ಯಕ್ಷ ವೈ.ಸಿ.ಸಿದ್ದೇಗೌಡ ಮಾತನಾಡಿ,ಜನರಿಂದ ಜನರಿಗೆ, ನಾಲಿಗೆಯಿಂದ ನಾಲಿಗೆಗೆ ಹೃದಯದಿಂದ ಹೃದಯಕ್ಕೆ ಜನಪದ ರಸವಾಕ್ಯಗಳು ತಟ್ಟಿ ಹೊಸ ಸಾರ್ಥಕ ಬದುಕಿಗೆ ನಿದರ್ಶನವಾಗಿ ಜಾನಪದ ಗೀತೆಗಳು ಬಾಳಿವೆ. ನಮ್ಮ ಪೂರ್ವಜರಿಗೆ ಬದುಕಿನ ಬಗ್ಗೆ ಎಷ್ಟೊಂದು ಆಸ್ಥೆ ಇತ್ತೋ ಅಷ್ಟೇ ಮಾನವೀಯ ಮೌಲ್ಯಗಳ ಬಗ್ಗೆ ಕಾಳಜಿ ಇತ್ತು. ಬದುಕು ಕೇವಲ ನಿಂತ ನೀರಲ್ಲ. ಪ್ರತಿನಿತ್ಯ ಬಾಳನ್ನು ಸಂಸ್ಕರಿಸಬೇಕು. ದುಃಖ ಸುಖಗಳಲ್ಲೂ ತಟಸ್ಥ ಭಾವ ಇರಬೇಕು. ಬರುವ ಕಷ್ಟಗಳಿಗೆ ಎದುರಿಸುವ ಧೈರ್ಯವಿರಬೇಕು. ಬಾಳು ಗಂಭೀರವಾಗಿ ಕಂಡರೂ ಸರ್ವಕಾಲಕ್ಕೂ ಖುಷಿಯಿಂದ ಜೀವಿಸಬೇಕು ಎಂಬುವ ಅನೇಕ ಉದಾತ ವಿಚಾರಗಳು ನಮ್ಮ ಜನರದು. ಅಂತಲೆ ನಮ್ಮ ನಡುವೆ ಗಾದೆಗಳು, ಒಗಟುಗಳು, ಕುಟ್ಟುವ, ಬೀಸುವ, ನೀತಿಯ, ಸೋಬಾನ, ಕಥೆನಡೆಸಿಕೊಟ್ಟಿದ್ದಾರೆ ದಗಳು ಹುಟ್ಟಿಕೊಂಡವು ಇಂತಹ ಅಮೂಲ್ಯ ಸಾಹಿತ್ಯವನ್ನು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಿಳಿಸುವ ಮಹತ್ವಪೂರ್ಣ ಕೆಲಸ ತಾಲ್ಲೂಕು ಜಾನಪದ ಪರಿಷತ್ತು ನಡೆಸುತ್ತಿದೆ ಎಂದರು.
ಪೂರ್ಣಪ್ರಜ್ಞ ವಿದ್ಯಾ ಕೇಂದ್ರದ ಪ್ರಾಂಶುಪಾಲರಾದ ಎನ್.ಪ್ರಶಾಂತ್ ಕುಮಾರ್ ಮಾತನಾಡಿ, ಪೂರ್ಣಪ್ರಜ್ಞ ವಿದ್ಯಾ ಕೇಂದ್ರ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಅದ್ವಿತೀಯವಾಗಿ ವಿದ್ಯಾರ್ಥಿಗಳು ಪೂರಕ ಶಿಕ್ಷಣ ನೀಡುತ್ತಿದೆ. ಅಂತಯೇ ಎಲ್ಲಾ ಸಾಹಿತ್ಯದ ಅಡಿಪಾಯವಾದ ಜಾನಪದ ಸಾಹಿತ್ಯವನ್ನು ತಿಳಿಸುವ ನಿಟ್ಟಿನಲ್ಲಿ ತಾಲ್ಲೂಕು ಜಾನಪದ ಸಾಹಿತ್ಯ ಪರಿಷತ್ತು ಉತ್ತಮ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮ ಪೂರ್ಣಪ್ರಜ್ಞ ವಿದ್ಯಾ ಕೇಂದ್ರ ಪ್ರಾಂಶುಪಾಲ ಎನ್.ಪ್ರಶಾಂತ್ ಕುಮಾರ್, ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹೆಬ್ಬಾಳು ಹಾಲಪ್ಪ, ಹಾಸನ ಸರ್ಕಾರಿ ಗೃಹ ವಿಜ್ಞಾನ ಕಾಲೇಜು ನಿವೃತ್ತ ಇತಿಹಾಸ ಪ್ರಾಧ್ಯಾಪಕರಾದ ಡಾ.ವಿದ್ಯಾ , ಸಾಹಿತ್ಯ ಇಂದಿರಮ್ಮ, ನಿವೃತ್ತ ಪ್ರಾಂಶುಪಾಲರಾದ ಎನ್.ಪುಟ್ಟರಾಜು, ಸಾಹಿತಿ ಸೋಂಪುರ ಪ್ರಕಾಶ್, ಪ್ರಾಂಶುಪಾಲರಾದ ಸುನೀತಾ ಕುಮಾರ್, ಉಪನ್ಯಾಸಕ ಧನಂಜಯ, ಶೇಷಪ್ಪ ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಕವನ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಬಾಕ್ಸ್ ನ್ಯೂಸ್ : ಹೆಬ್ಬಾಳು ಹಾಲಪ್ಪ. ಪತ್ರಕರ್ತರು ಹಾಗೂ ಅಧ್ಯಕ್ಷರು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಬೇಲೂರು -ಜನಪದ ಸಾಹಿತ್ಯದಲ್ಲಿ ಮಾನವೀಯ ಮೌಲ್ಯ ಅಡಗಿವೆ. ಜನಪದ ಸತ್ಯ ಸಂಗತಿಗಳನ್ನೇ ಒಳಗೊಂಡಿದ್ದು, ಅಲ್ಲಿ ಕಾಲ್ಪನಿಕತೆಗೆ ಅವಕಾಶವಿಲ್ಲ. ಹಾಗಾಗಿ ಈ ಸಾಹಿತ್ಯ ಅಷ್ಟೊಂದು ವಿಶೇಷತೆ ಪಡೆದುಕೊಂಡಿದೆ.ಮನಸ್ಸಿನ ಭಾವನೆಗಳನ್ನು ಹೊರಹಾಕಲು, ದೇಶಿ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಜನಪದವೇ ಸೂಕ್ತವಾಗಿದೆ. ಅನುಭವ ಸಾಹಿತ್ಯದಿಂದ ಕೂಡಿದ ಕಾರಣದಿಂದ ವಿದ್ಯಾರ್ಥಿಗಳು ವಚನ ಸಾಹಿತ್ಯದ ಬಗ್ಗೆ ವಿಶೇಷ ಗಮನ ನೀಡಬೇಕು ಎಂದರು.
