ಸಕಲೇಶಪುರದ ಸರ್ಕಾರಿ ಆಸ್ಪತ್ರೆಗೆ ಹೆರಿಗೆ ಬಂದಿದ್ದ ಮಹಿಳೆ,
ಹಾಸನದ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟ ಮಗುವಿನ ತಾಯಿ
ಬದುಕುಳಿದ ಮಗು ಆಸ್ಪತ್ರೆ ಬಳಿ ಸಂಬಂಧಿಕರ ಆಕ್ರೋಶ,
ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ.
ಸಕಲೇಶಪುರ : ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಹೆರಿಗೆಗೆಂದು ಬಂದಿದ್ದ ಯುವತಿಯೊಬ್ಬಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು , ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದರಿಂದ ಸಕಲೇಶಪುರ ಆಸ್ಪತ್ರೆ ಆವರಣದಲ್ಲಿ ಪ್ರಕ್ಷುಬ್ದ ವಾತವರಣ ಮೂಡಿದ್ದು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪಟ್ಟಣದ ಕುಶಾಲನಗರ ಬಡಾವಣೆಯ ನಿವಾಸಿ ಆದಿಲ್ ಪಾಷಾ ಎಂಬುವರ ಪತ್ನಿ ತಬ್ಬಸುಮ್ (26)ಎಂಬುವರಿಗೆ ಹೆರಿಗೆಗಾಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು ಹೆಣ್ಣು ಮಗುವಿಗೆ ಜನುಮ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಯುವತಿಯನ್ನು ಆಂಬುಲೆನ್ಸ್ ಮುಖಾಂತರ ಹಾಸನದ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ ಪಟ್ಟಿದ್ದು ಮಗು ಬದುಕಿದೆ. ವೈದ್ಯರ ನಿರ್ಲಕ್ಷದಿಂದ ಯುವತಿ ಮೃತಪಟ್ಟಿದ್ದು ಮೃತ ಯುವತಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಯುವತಿಯ ಸಾವಿಗೆ ಕಾರಣರಾದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಆಸ್ಪತ್ರೆ ಆವರಣಕ್ಕೆ ಯುವತಿಯ ಸಂಬಂಧಿಕರು ಆಗಮಿಸಿ ಗುಂಪು ಗೂಡಿದ್ದರಿಂದ ಆಸ್ಪತ್ರೆ ಆವರಣದಲ್ಲಿ ಪ್ರಕ್ಷುಬ್ದ ವಾತವರಣ ಉಂಟಾಗಿದೆ.