ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ – ಹವಾಮಾನ ಇಲಾಖೆ ವರದಿ : ರಾಜ್ಯದಲ್ಲಿ ಏಪ್ರಿಲ್ 1ರ ನಾಳೆ ಹಾಗೂ ಏಪ್ರಿಲ್ 2ರ ನಾಡಿದ್ದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ( Rain in Karnataka ) ಎಂಬುದಾಗಿ ಹವಾಮಾನ ಇಲಾಖೆ ( Meteorological Department ) ಮುನ್ಸೂಚನೆ ನೀಡಿದೆ.ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಏಪ್ರಿಲ್ 1ರಂದು ಗುಡುಗು ಸಹಿತ ಮಳೆಯು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಆಗಲಿದೆ ಎಂದು ತಿಳಿಸಿದೆ.ಇನ್ನು ಏಪ್ರಿಲ್ 2ರ ನಾಡಿದ್ದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.ಈ ಬಳಿಕ ಏಪ್ರಿಲ್ 3ರಿಂದ ಏಪ್ರಿಲ್ 5ರವರೆಗೆ ಮಳೆಯಿಲ್ಲ. ಎಂದಿನಂತೆ ಬಿಸಿಲ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.