ಹಾಸನ : ತಾಲೂಕಿನ ಬಸವನಹಳ್ಳಿ ಬಳಿ ಆಟವಾಡುತ್ತಿದ್ದ ವೇಳೆ ಮಂಗಳವಾರ ಸಂಜೆ ನಾಪತ್ತೆ ಆಗಿದ್ದ ೧೨ ವರ್ಷದ ಬಾಲಕ ಬುಧವಾರ ಮಧ್ಯಾಹ್ನ ಗ್ರಾಮದ ಹೋರ ವಲಯದ ರೈಲ್ವೆ ಟ್ರ್ಯಾಕ್ ನಲ್ಲಿ ಶವವಾಗಿ ಪತ್ತೆ ಆಗಿದ್ದಾನೆ.

ಚಿಕ್ಕ ಹೊನ್ನೇನಹಳ್ಳಿ ಗ್ರಾಮದ ವೆಂಕಟೇಶ್ ಹಾಗೂ ರೂಪ ದಂಪತಿ ಮಗನಾಗಿರುವ ಕುಶಾಲ್ ಗೌಡ ಮೃತ ಬಾಲಕ ನಾಗಿದ್ದು, ನೆನ್ನೆ ಗ್ರಾಮದಲ್ಲಿ ಶಾಲೆ ಮುಗಿಸಿ ಬಂದ ಬಳಿಕ ಕಣ್ಣ ಮುಚ್ಚಾಲೆ ಆಡುತ್ತಿದ್ದ ವೇಳೆ ಬಚ್ಚಿಟ್ಟುಕೊಳ್ಳಲು ಹೋದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆ ಆಗಿದ್ದನು.

ಬಳಿಕ ಚಿರತೆ ಹೊತ್ತೊಯ್ದ ಶಂಕೆ ವ್ಯಕ್ತ ಪಡಿಸಿ ಗ್ರಾಮಸ್ಥರು ಹಾಗೂ ರಾತ್ರಿ ಎಲ್ಲಾ ಕುಟುಂಬಸ್ಥರು ಹುಡುಕಾಟ ನಡೆಸಿದರೂ ಬಾಲಕನ ಸುಳಿವು ಸಿಕ್ಕಿರಲಿಲ್ಲ. ಬುಧವಾರದಂದು ಮದ್ಯಾಹ್ನ ಬಾಲಕನು ರೈಲ್ವೆ ಟ್ರ್ಯಾಕ್ ಬಳಿ ಶವವಾಗಿ ಪತ್ತೆಯಾಗಿದ್ದು, ಮೊದಲು ಕೊಲೆ ಮಾಡಿ ಟ್ರ್ಯಾಕ್ ಮೇಲೆ ಎಸೆಯುವ ಮೂಲಕ ಇದು ರೈಲು ಅಪಘಾತವೆಂದು ಬಿಂಬಿಸಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿದ ಹಾಸನ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಹಾಗೂ ಎಫ್.ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಾಲಕನನ್ನು ನೋಡಿದ ಪೋಷಕರು ಹಾಗೂ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿತ್ತು. ಬಾಲಕನನ್ನು ಕೊಲೆ ಮಾಡಿದ ಪಾಪಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *