
ಆಲೂರು : ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಕರ್ನಾಟಕ ಸರ್ಕಾರ ಹಾಸನ ಜಿಲ್ಲಾಡಳಿತದ ವತಿಯಿಂದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಜಿಲ್ಲಾಮಟ್ಟದ ಅಧಿಕಾರಿ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸಿಮೆಂಟ್ ಮಂಜು ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿ ತಮ್ಮ ಅವಹಾಲು ಅರ್ಜಿಗಳನ್ನು ಇಟ್ಟು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡರು,ಜಿಲ್ಲಾಧಿಕಾರಿ ಸತ್ಯಭಾಮಾ ರವರು ಸಾರ್ವಜನಿಕರಿಂದ ಬಂದ ಅಹವಾಲುಗಳಿಗೆ ತುರ್ತುಕ್ರಮ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸಾರ್ವಜನಿಕರು ಹೊತ್ತು ತಂದ ಕುಂದು-ಕೊರತೆ ಹಾಗೂ ಅಹವಾಲುಗಳಿಗೆ ಸ್ಪಂದಿಸುವ ಕೆಲಸವಾಗಬೇಕು.
ಸಾಧ್ಯವಾದಷ್ಟು ಬೇಗನೇ ಇತ್ಯರ್ಥಗೊಳಿಸಿ, ಅಧಿಕಾರಿ ಹಾಗೂ ಇಲಾಖೆಯ ಮೇಲೆ ವಿಶ್ವಾಸ ಮೂಡಿಸುವ ಕಾರ್ಯವಾಗಬೇಕು ಮತ್ತು ಯಾರೊಬ್ಬ ಅಧಿಕಾರಿಗಳು ತಮ್ಮ ಬೇಜವಾಬ್ದಾರಿತನವನ್ನು ತೋರದೆ ಜನರಿಗೆ ಕೆಲಸ ಮಾಡಿಕೊಡಬೇಕು ಎಂದರು.
ಸ್ಥಳದಲ್ಲಿ ಸ್ವೀಕೃತಗೊಂಡ ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸಿ ಅಧಿಕಾರಿಗಳು ಕೆಲಸ ಮಾಡಿಕೊಡದಿದ್ದರೆ ಒಂದು ತಿಂಗಳು ಗಡುವು ನೀಡಿ, ತಮ್ಮ ಕೆಲಸ ಮಾಡಿಕೊಡದಿದ್ದರೆ ಮತ್ತೆ ನಮ್ಮನ್ನು ಭೇಟಿ ಮಾಡಲು ತಿಳಿಸಿ ಎಲ್ಲಾ ಇಲಾಖೆವಾರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು,.
ಜನಸ್ಪಂದನ ಕಾರ್ಯಕ್ರಮ ಸರಕಾರದ ಮಹತ್ವದ ಕಾರ್ಯಕ್ರಮವಾಗಿದ್ದು ತಾಲ್ಲೂಕಿನಲ್ಲಿ ಬಂದಿದ್ದ ಸಮಸ್ಯೆದಾರರನ್ನು ನೋಡಿ ಬೇಸರ ವ್ಯಕ್ತ ಪಡಿಸಿದರು.
ಸ್ವೀಕೃತಗೊಂಡ 300 ಕ್ಕೂ ಹೆಚ್ಚು ಅರ್ಜಿಗಳನ್ನು ಸಂಪೂರ್ಣವಾಗಿ ಇತ್ಯರ್ಥಗೊಳಿಸಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು
ಬಂದ ಅರ್ಜಿಗಳನ್ನು ,ಎಲ್ಲಾ ಸಂಬಂಧಪಟ್ಟ ಇಲಾಖೆಯಾವರು ಅರ್ಜಿಗಳಿಗೆ ತುರ್ತಾಗಿ ಇತ್ಯರ್ಥಗೊಳಿಸಲು ಹೇಳಿದರು.
ನಂತರ ನಡೆದ ಸಾರ್ವಜನಿರ ಅಹವಾಲು ಸ್ವೀಕಾರದಲ್ಲಿ ಒಟ್ಟು 500ಕ್ಕೂ ಅರ್ಜಿಗಳ ಸ್ವೀಕೃತಗೊಂಡಿದ್ದು, ಅದರಲ್ಲಿ ಮುಖ್ಯವಾಗಿ ಸ್ಮಶಾನ, ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ, ನಿವೇಶನ, ಒಳಚರಂಡಿ ಹಾಗೂ ಕಸ ವಿಲೇವಾರಿ ಸಮಸ್ಯೆ, ಮತ್ತು ತಾಲ್ಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಬಗ್ಗೆ ಹೆಚ್ಚಿನ ಗಮನಹರಿಸಲು ತಾಲ್ಲೂಕು ತಹಸೀಲ್ದಾರ್ ಗೆ ತಿಳಿಸಿದರು.
ವಿವಿಧ ಸಂತ್ರಸ್ತರಿಂದ ನಿವೇಶನಕ್ಕಾಗಿ ಅರ್ಜಿಗಳು ಬಂದಿದ್ದರೆ ವಿದ್ಯುತ್ ಸಮಸ್ಯೆ ಶಾಲಾ ಶಿಕ್ಷಣ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಸ್ವೀಕೃತಗೊಂಡಿದ್ದವು ಹಾಗೂ ತಾಲ್ಲೂಕಿನಲ್ಲಿ ಮಾರುಕಟ್ಟೆ ಸ್ಥಾಳಂತರ ಹಾಗೂ ಹಳ್ಳಿಗಳ ರಸ್ತೆ ಮೂಲಭೂತ ಸೌಕರ್ಯಗಳು ಮತ್ತು ಮನೆಗೆ ಹಾಗೂ ರೈತರ ಜಮೀನುಗಳಿಗೆ ವಿದ್ಯುತ್ ಸಂಪರ್ಕ ಕೊಡದೇ ಇರುವ ಬಗ್ಗೆ ಶಾಸಕರ ಗಮನಕ್ಕೆ ತಂದರು.
ಜಮೀನಿಗೆ ವಿದ್ಯುತ್ ಸಂಪರ್ಕ, ಕೆರೆ, ನಾಲೆ ಶುಚಿ ಯೋಜನೆ ಬಗ್ಗೆ ಅಹವಾಲುಗಳು ಸಲ್ಲಿಕೆಯಾದವು ಅಲ್ಲದೇ ಪಟ್ಟಣದಲ್ಲಿ ಬಸ್ ನಿಲ್ಲಿಸುವ ಬಗ್ಗೆ ಅರ್ಜಿಗಳು ಸ್ವೀಕೃತಗೊಂಡಿದ್ದು, ಹಾಸನ ಘಟಕ ವ್ಯವಸ್ಥಾಪಕರವರು ಗಮನಕ್ಕೆ ತಂದು ಕ್ರಮವಹಿಸಲಾಗುವುದೆಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಧಿಕಾರಿ ಪೂರ್ಣಿಮಾ, ಉಪ ವಿಭಾಗಾಧಿಕಾರಿ ಶೃತಿ, ಡಿವೈಎಸ್ಪಿ ಪ್ರಮೋದ್ ಕುಮಾರ್, ತಹಶೀಲ್ದಾರ್ ನಂದಕುಮಾರ್, ಸಿ ಎಸ್ ಚಂದ್ರಶೇಖರ್, ಹಾಸನ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಆಲೂರು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರಿದ್ದರು







