
ಸಕಲೇಶಪುರ : ಮಾನ್ಯ ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ ರವರ ಜನಸ್ಪಂದನಾ ಕಾರ್ಯಕ್ರಮವನ್ನು ಸಕಲೇಶಪುರ ಪಟ್ಟಣದ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ದಿನಾಂಕ: 12.07.2024 ಶುಕ್ರವಾರದಂದು ಬೆಳಗ್ಗೆ 11.00 ಗಂಟೆಯಿಂದ ಹಮ್ಮಿಕೊಳ್ಳಲಾಗಿರುತ್ತದೆ.
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಜನರ ಅಗತ್ಯ ಸಮಸ್ಯೆಗಳನ್ನು ಬಗೆಹರಿಸುವುದು ಹಾಗೂ ಇನ್ನಿತರ ಇಲಾಖೆಗಳಿಂದ, ಸಾರ್ವಜನಿಕರಿಗೆ, ರೈತರಿಗೆ ಹಲವು ಸವಲತ್ತುಗಳನ್ನು ವಿತರಿಸಲಾಗುವುದು.
ಸದರಿ ದಿನದಂದು ಕಂದಾಯ ಇಲಾಖೆ ಹಾಗೂ ಇತರೆ ಇಲಾಖೆಗಳಿಂದ ಸಿಗುವ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವುದು. ಬಹುತೇಕವಾಗಿ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು ಮತ್ತು ಜಟಿಲ ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ನಿಗಧಿತ ಕಾಲಾವಕಾಶದೊಳಗೆ ಬಗೆಹರಿಸಲು ಕ್ರಮವಹಿಸಲಾಗುವುದು
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಅಹವಾಲುಗಳನ್ನು ತಿಳಿಸಬೇಕಾಗಿ ಕೋರಲಾಗಿದೆ.
ಇಂತಿ:-ತಹಸೀಲ್ದಾರ್ ರವರು, ಸಕಲೇಶಪುರ, ತಾಲೂಕು.ಹಾಸನ ಜಿಲ್ಲೆ.
