ಖ್ಯಾತ ಕನ್ನಡದ ನಿರೂಪಕಿ ಅಪರ್ಣಾ ಅವರು ಇಂದು ರಾತ್ರಿ 9.15 ಸುಮಾರಿಗೆ ನಿಧನರಾಗಿದ್ದಾರೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಅಪರ್ಣಾ ಅವರ ನಿವಾಸದತ್ತ ಚಿತ್ರರಂಗದ ಹಲವಾರು ಗಣ್ಯರು ಆಗಮಿಸುತ್ತಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅಪರ್ಣಾ ಅವರ ನಿಧನದ ಸುದ್ದಿಯನ್ನು ಸಹ ನಟ ರವಿಶಂಕರ್​​ಗೌಡ ಅವರು ಖಚಿತಪಡಿಸಿದ್ದಾರೆ.

ಅಪರ್ಣಾ 1989ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. ಇವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಅಪರ್ಣಾ ಅವರು ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *