ಕರ್ನಾಟಕ ಸರ್ಕಾರ ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಜಿಲ್ಲೆ, ಹಾಸನ.

ಮಳೆಯ ಕಾರಣ ದಿನಾಂಕ 16/07/2024 ರಂದು ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದ್ದು ಕೆಲವು ಕಡೆಗಳಲ್ಲಿ ಮಕ್ಕಳು ಹಳ್ಳ ತೊರೆಗಳನ್ನು ದಾಟಿ ಶಾಲೆಗೆ ಬರಬೇಕಾದ ಪರಿಸ್ಥಿತಿ ಇರುತ್ತದೆ. ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಉಲ್ಲೇಖ (1) ರಂತೆ ಮಾನ್ಯ ಜಿಲ್ಲಾಧಿಕಾರಿಗಳು ಒಪ್ಪಿಗೆ ನೀಡಿದ್ದು ದಿನಾಂಕ 16/07/2024ರಂದು ಸಕಲೇಶಪುರ, ಆಲೂರು, ಬೇಲೂರು ಮತ್ತು ಹಾಸನ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಸದರಿ ದಿನದ ತರಗತಿಗಳನ್ನು ದಿನಾಂಕ 20/07/2024 ರ ಶನಿವಾರದಂದು ಸರಿದೂಗಿಸಿಕೊಳ್ಳವಂತೆ ಸೂಚಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *