ಈ ಭಾರಿ ಚುಣಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಜೆಡಿಎಸ್, ಮತದಾನದ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಇಂದು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹಾಸನ ವಿಧಾನಸಭಾ ಕ್ಷೇತ್ರದ ಕುರಿತಂತೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿದೆ.
ದಿನಕಳೆದಂತೆ ಹಾಸನದಲ್ಲಿ ಭವಾನಿ ರೇವಣ್ಣ ಹಾಗೂ ಸ್ವರೂಪ್ ರವರ ನಡುವೆ ಟಿಕೆಟ್ಗಾಗಿ ಪೈಪೂಟಿ ನಡೆಯುತ್ತಿದ್ದು ಜನ ಸಾಮಾನ್ಯರಲ್ಲಿ ಕುತೂಹಲ ಹೆಚ್ಚಾಗಿದೆ. ಮಾಜಿ ಶಾಸಕ ಪ್ರಕಾಶರವರ ಪುತ್ರ
ಸ್ವರೂಪ್ ಟಿಕೆಟ್ ಆಕಾಂಕ್ಷಿಯಾಗಿದ್ದು. ಜೆಡಿಎಸ್
ನ ಶಾಸಕಾಂಗ ಪಕ್ಷದ ನಾಯಕರಾದ ಕುಮಾರ್ ಸ್ವಾಮಿ ಸ್ವರೂಪ್ ಪರವಾಗಿದ್ದರೆ ಪತ್ನಿಗೆ ಟಿಕೆಟ್
ಕೊಡಿಸಲುರೇವಣ್ಣ ಹರ ಸಾಹಸ ಮಾಡುತ್ತಿರುವುದು ಪಕ್ಷದ ದಲೇ
ಇರುಸು ಮುರುಸು ತಂದೊಡ್ಡಿದೆ.
ಹೀಗಾಗಿ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಜೆಡಿಎಸ್ ನಾಯಕರಿಗೆ ಕಗ್ಗಂಟಾಗಿ ಪರಿಣಮಿಸಿದ್ದು, ತಮ್ಮ ಪತ್ನಿಗೆ ಟಿಕೆಟ್ ಸಿಗದಿದ್ದರೂ ಪರವಾಗಿಲ್ಲ ಯಾವುದೇ ಕಾರಣಕ್ಕೂ ಸ್ವರೂಪ್ ಅವರಿಗೆ ಟಿಕೆಟ್ ನೀಡಬಾರದು ಎಂದು ಎಚ್.ಡಿ. ರೇವಣ್ಣ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುವ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕುಮಾರಸ್ವಾಮಿ ಹೇಳುತ್ತಿದ್ದು, ಇಂದು ಬಿಡುಗಡೆಯಾಗಲಿರುವ ಪಟ್ಟಿಯಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.