ಬೇಲೂರು : ಮಲೆನಾಡು ಭಾಗವಾದ ಚೀಕನಹಳ್ಳಿ ,ಗೆಂಡೇಹಳ್ಳಿ ಹಾಗೂ ಬಿಕ್ಕೋಡು ,ಅರೇಹಳ್ಳಿ ಭಾಗದಲ್ಲಿ ವ್ಯಾಪಕವಾದ ಮಳೆ ಸುರಿಯುತ್ತಿದ್ದು ಬಾರಿ ಗಾಳಿ ಮಳೆಗೆ ಚೀಕನಹಳ್ಳಿ ಹಾಗೂ ಗೆಂಡೇಹಳ್ಳಿ ಭಾಗದಲ್ಲಿ ಸುಮಾರು ೨೦ ಕ್ಕೂ ಹೆಚ್ಚು ರಸ್ತೆ ಪಕ್ಕದ ಮರಗಳು ಹಾಗು ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮವಾಗಿ ಪಟ್ಟಣ ಹಾಗೂ ಮಲೆನಾಡು ಭಾಗದಲ್ಲಿ ಕತ್ತಲೆಯಲ್ಲಿ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ.

ಕೆಇಬಿ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಟ್ಟು ಮರಗಳನ್ನು ತೆರವುಗೊಳಿಸುವುದರ ಜೊತೆಗೆ ವಿದ್ಯುತ್ ಕಂಬಗಳನ್ನು ಸರಿಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಎಇಇ ಬಸವರಾಜು ಮಾತನಾಡಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯಿತ್ತಿರುವ ಮಳೆ ಗಾಳಿಗೆ ತಾಲೂಕಿನಲ್ಲಿ ೩೮ ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಹಾಗು ೨ ಟ್ರಾನ್ಸ ಫರಂ ಸಂಪೂರ್ಣ ಹಾನಿಯಾಗಿದೆ.

ಮಲೆನಾಡು ಭಾಗದಲ್ಲಿ ವಿದ್ಯುತ್ ಲೈನ್ ಗಳ ಮೇಲೆ‌ಮರಗಳು ಬಿದ್ದ ಪರಿಣಾಮವಾಗಿ ನಮ್ಮ ಸಿಬ್ಬಂದಿಗಳು ಹರಸಾಹಸ ಪಟ್ಟು ಮರಗಳನ್ನು ತೆರವುಗೊಳಿಸುವ ಕೆಲಸ ಮಾಡುತ್ತಿದ್ದು ಪಟ್ಟಣ ಸೇರಿದಂತೆ ಹಲವೆಡೆ ವಿದ್ಯುತ್ ತೊಂದರೆಯಾಗಿದೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *