ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಇದೇ ವೇಳೆ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಿದ್ದಕ್ಕೆ ಟೀಕಿಸಿರುವ ಸಿ.ಎಂ. ಇಬ್ರಾಹಿಂ, ಯು.ಟಿ ಖಾದರ್ ಅವರನ್ನು ಡಿಸಿಎಂ ಮಾಡಬಹುದಿತ್ತಲ್ಲ. ಅವರನ್ನು ಸ್ಪೀಕರ್ ಮಾಡಿದ್ದಾರೆ. ಈಗ ಅವರು ಎದ್ದೇಳಂಗು ಇಲ್ಲ, ಮಾತನಾಡಂಗೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *