
ರಾಷ್ಟ್ರೀಯ ಹೆದ್ದಾರಿ-48(75) ರ ಬೆಂಗಳೂರು-ಮಂಗಳೂರು ರಸ್ತೆಯ ಹಾಸನ (K.M.184+ 912) 20 (K.M.230 + 060) ಮಾರನಹಳ್ಳಿ ರವರೆಗಿನ ಶಿರಾಡಿಘಾಟ್ ರಸ್ತೆಯಲ್ಲಿ ವಾಹನಗಳಿಗೆ ಸಂಚಾರವನ್ನು ಜುಲೈ 18 ರಿಂದ ನಿಷೇದಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಸಿ.ಅವರು ಆದೇಶ ಹೊರಡಿಸಿದ್ದಾರೆ
ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ-48(75) ರ ಬೆಂಗಳೂರು-ಮಂಗಳೂರು ರಸ್ತೆಯ ಹಾಸನ (K.M.184+ 912) ಇಂದ (K.M.230 + 060) ಮಾರನಹಳ್ಳಿ ವರೆಗಿನ ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿರುವುದರಿಂದ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲವನ್ನು ಮನಗಂಡು, ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು ಬೆಳಗ್ಗೆ 6:00 ರಿಂದ ಸಂಜೆ 6:00 ರವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು (ತುರ್ತು ಪರಿಸ್ಥಿತಿ ವಾಹನ ಹೊರತುಪಡಿಸಿ) ನಿಷೇಧಿಸುವಂತೆ
ಉಲ್ಲೇಖ(1)ರ ಪತ್ರದಲ್ಲಿ ಕೊರಿರುತ್ತಾರೆ.
ಉಲ್ಲೇಖ(2)ರಲ್ಲಿ ಪೊಲೀಸ್ ಅಧೀಕ್ಷಕರು ಹಾಸನ ರವರು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡತಪ್ಪಲು ಗ್ರಾಮದ ಬಳಿ ಅತೀ ಹೆಚ್ಚು ಮಳೆಯ ಕಾರಣ ಗುಡ್ಡ ಕುಸಿತ ಉಂಟಾಗಿ ರಾಷ್ಟ್ರೀಯ ಹೆದ್ದಾರಿ- 75 ರಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿತದಿಂದ ಮಣ್ಣು ರಸ್ತೆಗೆ ಬಿದ್ದಿದ್ದು ಇದರಿಂದ ವಾಹನಗಳು ಸಂಚರಿಸಲು ಅಸಾಧ್ಯವಾಗುತ್ತಿದ್ದು ಮುಂದಿನ ದಿನಗಳಲ್ಲಿಯೂ ಸಹ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಮತ್ತಷ್ಟು ಗುಡ್ಡ ಕುಸಿತ ಉಂಟಾಗಿ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗುವ ಸಾಧ್ಯತೆ ಇರುವುದರಿಂದ ವಾಹನಗಳು ಸಂಚರಿಸದಂತೆ ನಿರ್ಭಂಧನೆ ಮಾಡಿ ಬದಲಿ ರಸ್ತೆಯಲ್ಲಿ ಸಂಚರಿಸಲು ಆದೇಶಿಸಬೇಕಾಗಿ ಕೋರಿರುತ್ತಾರೆ.
ಉಲ್ಲೇಖ(1) ಮತ್ತು (2)ರ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಹಾಸನ ಮತ್ತು ಪೊಲೀಸ್ ಅಧೀಕ್ಷಕರು ಹಾಸನ ಅವರುಗಳ ವರದಿಯನ್ನು ಪರಿಶೀಲಿಸಲಾಗಿ ರಾಷ್ಟ್ರೀಯ ಹೆದ್ದಾರಿ-48(75) ರ ಬೆಂಗಳೂರು-ಮಂಗಳೂರು ರಸ್ತೆಯ ಹಾಸನ (K.M.184+ 912) ಇಂದ (K.M.230 + 060) ಮಾರನಹಳ್ಳಿ ರವರೆಗಿನ ರಸ್ತೆಯಲ್ಲಿ ತುರ್ತು ಪರಿಸ್ಥಿತಿ ವಾಹನಗಳನ್ನು (ಅಂಬುಲೆನ್ಸ್ ಮತ್ತು ಅಗ್ನಿ ಶಾಮಕ ವಾಹನಗಳು) ಹೊರತುಪಡಿಸಿ ಉಳಿದ ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು ಸಾರ್ವಜನಿಕ ಹಿತದೃಷ್ಠಿಯಿಂದ ನಿಷೇಧಿಸುವುದು ಸೂಕ್ತವೆಂದು ಮನಗಂಡು ಈ ಕೆಳಕಂಡಂತೆ ಆದೇಶಿಸಲಾಗಿದೆ.
18/07/2024:: ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಂದ ಸತ್ಯಭಾಮ. ಸಿ..ಭಾ.ಆ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಹಾಸನ ಜಿಲ್ಲೆ, ಹಾಸನ ಆದ ನಾನು ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 115 ಹಾಗೂ ಕರ್ನಾಟಕ ಮೋಟಾರ್ ವಾಹನಗಳ ನಿಯಮ 1989 ರ ನಿಯಮ 221ಎ(5) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಷ್ಟ್ರೀಯ ಹೆದ್ದಾರಿ-48(75) ರ ಬೆಂಗಳೂರು-ಮಂಗಳೂರು ರಸ್ತೆಯ ಹಾಸನ (K.M.184+ 912) ಇಂದ (K.M.230 + 060) ಮಾರನಹಳ್ಳಿ ರವರೆಗಿನ ರಸ್ತೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ
ದಿನಾಂಕ:18/07/2024 ರಿಂದ ರಸ್ತೆ ದುರಸ್ತಿ ಕಾರ್ಯ ಮುಗಿಯುವ ವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು (ತುರ್ತು ಪರಿಸ್ಥಿತಿ ವಾಹನ ಹೊರತುಪಡಿಸಿ) ನಿರ್ಬಂಧಿಸಿ ಆದೇಶಿಸಿರುತ್ತಾರೆ. >
ಜಿಲ್ಲೆಯ ಮುಖಾಂತರ ಬೆಂಗಳೂರಿನಿಂದ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಹಾಸನ-ಬೇಲೂರು-ಮೂಡಿಗೆರೆ ಚಾರ್ಮುಡಿ ಮಾರ್ಗವನ್ನು ಬಳಸಬಹುದಾಗಿದೆ. ಎಂದು ಉಲ್ಲೇಖದಲ್ಲಿ ತಿಳಿಸಿದ್ದಾರೆ.

