
ಸಕಲೇಶಪುರ : ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೆತ್ತೂರು ಹೋಬಳಿಯ ಮಾಗೇರಿ ಹಳ್ಳದ ಸೇತುವೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದು ಮಾಗೇರಿಯಿಂದ ಸೋಮವಾರಪೇಟೆಗೆ ಹೋಗುವ ರಸ್ತೆ ಇದಾಗಿದ್ದು ವಾಹನ ಸವಾರರು ಈ ರಸ್ತೆಯಲ್ಲಿ ಪ್ರಯಾಣಿಸುವುದು ಅಸಾಧ್ಯವೆಂದು ಹೇಳಲಾಗುತ್ತಿದ್ದು ಇದೇ ರೀತಿ ಮಳೆ ಮುಂದುವರೆದರೆ ಕೃಷಿ ಜಮೀನುಗಳ ಮೇಲೆ ನೀರು ನುಗ್ಗುವ ಆತಂಕ ಎದುರಾಗಿದ್ದು ರೈತರು ಹಾಗೂ ವಾಹನ ಸವಾರರು ಕಂಗಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.
