ಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ : ರಾಹುಲ್ ಗಾಂಧಿ – ಪ್ರಧಾನಿ ನರೇಂದ್ರ ಮೋದಿಯವರ ನೂತನ ಸಂಸತ್ತಿನ ಸಂಕೀರ್ಣ ಉದ್ಘಾಟನೆಯನ್ನು ಬಹಿಷ್ಕರಿಸಲು 19 ವಿರೋಧ ಪಕ್ಷಗಳು ನಿರ್ಧರಿಸಿದ್ದು, ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ “ಅಪಮಾನ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.ಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನವನ್ನು ಲೋಕಾರ್ಪಣೆ ಮಾಡುವ ಸಮಾರಂಭವನ್ನು ಕಾಂಗ್ರೆಸ್, ಆಮ್ ಆದ್ಮಿಪಾರ್ಟಿ (ಎಎಪಿ), ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ 19 ವಿರೋಧ ಪಕ್ಷಗಳು ಬಹಿಷ್ಕರಿಸಿವೆ. ಇದರ ಬೆನ್ನಲ್ಲೇ ರಾಹುಲ್ ಹೇಳಿಕೆ ನೀಡಿದ್ದಾರೆ.”ರಾಷ್ಟ್ರಪತಿಯವರನ್ನು ಉದ್ಘಾಟನೆಗೆ ಕರೆತರದಿರುವುದು ಅಥವಾ ಅವರಿಗೆ ಆಹ್ವಾನ ನೀಡದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡುವ ಅವಮಾನ. ಸಂಸತ್‌ ಭವನವನ್ನು ಸಾಂವಿಧಾನಿಕ ಮೌಲ್ಯಗಳಿಂದ ನಿರ್ಮಿಸಬೇಕೇ ಹೊರತು ಗರ್ವದ ಇಟ್ಟಿಗೆಗಳಿಂದಲ್ಲ” ಎಂದು ರಾಹುಲ್ ಟ್ವಿಟ್ ಮಾಡಿದ್ದಾರೆ.ಪ್ರಧಾನಿ ಮೋದಿ ಅವರು ನೂತನ ಸಂಸತ್‌ ಕಟ್ಟಡವನ್ನು ಮೇ 28 ರಂದು (ಶುಕ್ರವಾರ) ಉದ್ಘಾಟಿಸಲಿದ್ದಾರೆ.ಇದನ್ನು ವಿರೋಧಿಸಿರುವ ವಿರೋಧ ಪಕ್ಷಗಳು, ”ರಾಷ್ಟ್ರಪತಿಯವರು ದೇಶದ ಮುಖ್ಯಸ್ಥರಷ್ಟೇ ಅಲ್ಲ, ಅವರು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ. ಹಾಗಾಗಿ ಪ್ರಧಾನಿ ಬದಲು ರಾಷ್ಟ್ರಪತಿಯವವರೇ ಸಂಸತ್ ಭವನದ ಲೋಕಾರ್ಪಣೆ ಮಾಡಬೇಕು” ಎಂದು ಆಗ್ರಹಿಸಿವೆ.ಕಾಂಗ್ರೆಸ್, ಎಡಪಕ್ಷಗಳು, ಆಮ್ ಆದ್ಮಿ ಪಕ್ಷ ಮತ್ತು ತೃಣಮೂಲ ಕಾಂಗ್ರೆಸ್ ಸೇರಿದಂತೆ 19 ವಿರೋಧ ಪಕ್ಷಗಳು, ಹೊಸ ಕಟ್ಟಡದಲ್ಲಿ ಯಾವುದೇ ಸಾಂವಿಧಾನಿಕ ಮೌಲ್ಯವನ್ನು ಕಾಣಲಾಗುವುದಿಲ್ಲ ಎಂದು ಪ್ರತಿಪಾದಿಸಿ ಉದ್ಘಾಟನಾ ಸಮಾರಂಭದಿಂದ ಹೊರಗುಳಿಯುವುದಾಗಿ ಹೇಳಿವೆ.ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಆಹ್ವಾನದ ಮೇರೆಗೆ ಮೋದಿ ಅವರು ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.”ರಾಷ್ಟ್ರಪತಿಗಳು ಭಾರತದಲ್ಲಿ ರಾಷ್ಟ್ರದ ಮುಖ್ಯಸ್ಥರು ಮಾತ್ರವಲ್ಲ, ಅವರು ಸಂಸತ್ತಿನ ಅವಿಭಾಜ್ಯ ಅಂಗವಾಗಿದ್ದಾರೆ. ರಾಷ್ಟ್ರಪತಿಗಳೇ ಕಟ್ಟಡ ಉದ್ಘಾಟನೆ ಮಾಡಬೇಕೇ ಹೊರತು ಪ್ರಧಾನಿಯಲ್ಲ” ಎಂದು ಎಂದು ವಿರೋಧ ಪಕ್ಷಗಳು ವಾದಿಸಿವೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *