
ಸಕಲೇಶಪುರ : ಹಾನು ಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟಹಳ್ಳಿಯಲ್ಲಿ ತಡರಾತ್ರಿ ಅತಿಯಾದ ಗಾಳಿ ಮತ್ತು ಮಳೆಯಿಂದಾಗಿ ಮರ ಒಂದು ಮನೆಯ ಮೇಲೆ ಮುರಿದು ಬಿದ್ದಿದೆ.
ರೇಖಾ ಬಿನ್ ಮೂರ್ತಿ ಎಂಬುವರ ಮನೆ ಮೇಲೆ ಮರ ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾಗಿದ್ದು ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಯಾದ ರಕ್ಷಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳಾದ ವೀಣಾ ಹಾಗೂ ಯೋಗರಾಜ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳು ಪರಿಶೀಲನ ವರದಿಯನ್ನು ಮೇಲಧಿಕಾರಿಗಳಿಗೆ ಸಲ್ಲಿಸಿದ್ದಾರೆ.



