ಸಕಲೇಶಪುರ : ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಮೇಲೆ ಮಳೆ ನೀರು ಸೋರಿಕೆಯಿಂದ ಕುಸಿತ ಕೊಂಡಿದೆ.

ಕಳೆದ ಎರಡು ವಾರಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಶಾಲೆ ಗೋಡೆಯ ಮೇಲೆ ನೀರು ಬಿದ್ದ ಪರಿಣಾಮ ಗೋಡೆ ಕುಸಿದಿದ್ದು ಸಂಬಂಧ ಪಟ್ಟ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು ಕೂಡಲೇ ಎಚ್ಚೆತ್ತುಕೊಂಡು ಶಾಲೆಗೆ ಹೆಚ್ಚಿನ ಹಾನಿಯಾಗದಂತೆ ಹಾಗೂ ಶಾಲೆ ಮಕ್ಕಳಿಗೆ ಶಿಕ್ಷಕರಿಗೆ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ ಅನುಕೂಲದ ವ್ಯವಸ್ಥೆಯನ್ನು ಮಾಡಬೇಕು, ಅದೇ ರೀತಿ ತಾಲೂಕಿನಾದ್ಯಂತ ಹೆಚ್ಚು ಮಳೆ ಆಗುತ್ತಿರುವ ಕಾರಣ ಹಲವು ಕಡೆ ಸರ್ಕಾರಿ ಶಾಲೆಗಳಿಗೆ ಹಾನಿಯಾಗಿದೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಮುಂಜಾಗ್ರತ ಕ್ರಮ ವಹಿಸಬೇಕು ಎಂದು ಕರವೇ ಪ್ರವೀಣ್ ಶೆಟ್ಟಿ ಬಣ ಗೌರವಾಧ್ಯಕ್ಷ ಬೆಳಗೋಡು ಬಸವರಾಜ್ ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮಸ್ಥರು ಇತರರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *