ಬೇಲೂರು : ತಾಲೂಕಿನ ಕಟ್ಟಕಡೆಯ ಗ್ರಾಮವಾದ ನಾರ್ವೆ ಹಾಗೂ ಸುತ್ತಮುತ್ತಲಿನ ಹತ್ತು ಗ್ರಾಮಗಳಿಗೆ ಬಿರಡಹಳ್ಳಿ ಮೂಲಕ ಸಂಪರ್ಕ ಕಲ್ಪಿಸುವ ಸೇತುವೆ ಅಬ್ಬಿಕಟ್ಟೆ ತುಂಬಿ ಹರಿಯುತ್ತಿರುವುದರಿಂದ ಸೇತುವೆ ಸಂಪೂರ್ಣ ಮುಚ್ಚಿಹೋಗಿದ್ದು ಸಾರ್ವಜನಿಕರ ಸಂಚಾರಕ್ಕೆ ಪರದಾಟ ವಾಗಿದೆ

ಸುದ್ದಿಗಾರರೊಂದಿಗೆ ಮಾತನಾಡಿದ ನಾರ್ವೆ ಗ್ರಾಮದ ಶ್ರೀಕಾಂತ್ ನಮ್ಮ ನಾರ್ವೆ ಗ್ರಾಪಂ ವ್ಯಾಪ್ತಿಯ ಅಬ್ಬಿಕಟ್ಟೆ ತುಂಬಿ ಹರಿಯುತ್ತಿರುವುದರಿಂದ ನಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಬಂದ್ ಆಗಿದ್ದು ಬೇರೆ ಗ್ರಾಮಗಳಿಗೆ ತೆರಳಲು ೨೦ ಕಿಮೀ ಸುತ್ತಿ ಮೂಡಿಗೆರೆ ಮಾರ್ಗವಾಗಿ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಪ್ರತೀ ಬಾರಿಯೂ ಈ ಕಟ್ಟೆ ತುಂಬಿ ಹರಿಯುವ ಸಂದರ್ಭದಲ್ಲಿ ಈ ರೀತಿ ಮುಳುಗಡೆಯಾಗುತ್ತಿದ್ದು ಶಾಸಕರು ಈ ಭಾಗದ ಜನರಿಗೆ ಶಾಶ್ವತ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *