ಬೇಲೂರು : ಕಾರ್ಗಿಲ್ ವಿಜಯ್ ದಿವಸ್”. ಪ್ರತಿ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅಥವಾ ಕಾರ್ಗಿಲ್ ವಿಜಯ ದಿನವನ್ನು ಆಚರಣೆ ಮಾಡಲಾಗುತ್ತದೆ.

ಭಾರತೀಯರಿಗೆ ಇದು ಎಂದೂ ಮರೆಯಲಾಗದ ದಿನವಾಗಿದೆ ಎಂದು ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ ಚಂದ್ರಮೌಳಿ ಹೇಳಿದರು.

ಪಟ್ಟಣದ ದೇವಸ್ಥಾನ ರಸ್ತೆಯ ಕಾವೇರಿ ಕ್ಲಿನಿಕ್ ಮುಂಭಾಗದಲ್ಲಿ ಲಯನ್ಸ್ ಸೇವಾ ಸಂಸ್ಥೆ ವತಿಯಿಂದ ಕಾರ್ಗಿಲ್ ವಿಜಯೋತ್ಸವ ದಿನವನ್ನು ಸಿಹಿ ಹಂಚುವ ಮೂಲಕ ಆಚರಿಸಲಾಯಿತು.

ಈ ವೇಳೆ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಕೂಡ ನಮ್ಮ ಲಯನ್ಸ್ ಸೇವಾ ಸಂಸ್ಥೆ ವತಿಯಿಂದ ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದ್ದು,ಕಾರ್ಗಿಲ್‌ ಯುದ್ಧ ಭಾರತೀಯ ಪ್ರತಿಯೋಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ.

ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ.

ಎಲ್ಲ ಭಾರತೀಯರಲ್ಲಿ ದೇಶಭಕ್ತಿ, ಸಮಾಜಸೇವೆಯ ಮನೋಭಾವ ಮೂಡಿದರೆ ಅದುವೇ ಸೈನಿಕರ ತ್ಯಾಗಕ್ಕೆ ಸಲ್ಲುವ ನಿಜವಾದ ಗೌರವವಾಗಿದೆ.

ಯಾವ ಭಾರತೀಯರೂ ಕಾರ್ಗಿಲ್ ಯುದ್ಧವನ್ನು ಮರೆಯಲು ಸಾಧ್ಯವೇ ಇಲ್ಲ. ಈ ಯುದ್ಧದಲ್ಲಿ ಭಾರತೀಯ ಸೈನಿಕರು ಕೆಚ್ಚೆದೆಯಿಂದ ಹೋರಾಡಿ ತನ್ನ ದೇಶದ ಘನತೆ, ಸಾಹಸವನ್ನು ಎತ್ತಿ ಹಿಡಿದಿದ್ದರು. ಇವರ ತ್ಯಾಗ, ಬಲಿದಾನ, ದೇಶಪ್ರೇಮ ಖಂಡಿತಾ ಎಲ್ಲಾ ಭಾರತೀಯರಿಗೂ ಸ್ಫೂರ್ತಿ, ದಾರಿದೀಪ ಎಂದರು.

ನಂತರ ಲಯನ್ಸ್ ಮಾಜಿ ಅಧ್ಯಕ್ಷ ಪೂವಯ್ಯ ಮಾತನಾಡಿ 1999ರ ಮೇ ನಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಉಗ್ರಗಾಮಿಗಳು ಕಾಶ್ಮೀರದ ಕಾರ್ಗಿಲ್ ಜಿಲ್ಲೆಗೆ ನುಸುಳಿದರು.

ಪರಿಣಾಮ ಗಡಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಸೈನ್ಯದ ನಡುವೆ ಸಶಸ್ತ್ರ ಸಂಘರ್ಷ ಆರಂಭಗೊಂಡಿತ್ತು. ಭಾರತೀಯ ಭೂಪ್ರದೇಶದಿಂದ ಒಳನುಗ್ಗುವವರನ್ನು ಓಡಿಸಲು ಭಾರತೀಯ ಸೇನೆ ‘ಆಪರೇಷನ್ ವಿಜಯ್’ ಎಂಬ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.

ಸುಮಾರು ಎರಡು ತಿಂಗಳಿಗೂ ಅಧಿಕ ಕಾಲ ಈ ಯುದ್ಧ ಮುಂದುವರಿದಿತ್ತು. ಈ ಯುದ್ಧದಲ್ಲಿ ಶೌರ್ಯದಿಂದ ಹೋರಾಡಿದ್ದ ಭಾರತೀಯ ಯೋಧರು ಪಾಕಿಸ್ತಾದ ಸೈನ್ಯ ಹಾಗೂ ಉಗ್ರಗಾಮಿಗಳನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ್ದರು. ಇದರ ಫಲವಾಗಿ ತನ್ನ ಭೂಪ್ರದೇಶದಲ್ಲಿ ಭಾರತ ಹಿಡಿತ ಸಾಧಿಸಿಕೊಂಡಿತ್ತು. ಕೊನೆಗೆ 1999ರ ಜುಲೈ 26ರಂದು ‘ಟೈಗರ್ ಹಿಲ್’ ಅನ್ನು ವಶಪಡಿಸಿಕೊಳ್ಳುವುದರೊಂದಿಗೆ ಯುದ್ಧ ಕೊನೆಗೊಂಡಿತು.

ಈ ಯುದ್ಧದಲ್ಲಿ ಭಾರತ ವಿಜಯ ಗಳಿಸಿತು. ಅಂದು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ರಕ್ಷಿಸಲು ಅದೆಷ್ಟೋ ಯೋಧರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಅತ್ಯಂತ ಸವಾಲಿನ ಪರಿಸ್ಥಿತಿಯಲ್ಲಿ ಹೋರಾಡಿ ದೇಶದ ರಕ್ಷಣೆ ಮಾಡಿದ್ದರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಮಾಜಿ ಅಧ್ಯಕ್ಷ ದೊಡ್ಡಮನೆ ಪ್ರಭಾಕರ್,ವೈ ಬಿ ಸುರೇಶ್,ಕೆ ಎಲ್ ಸುರೇಶ್,ಕಾರ್ಯದರ್ಶಿ ಮುಕ್ತಾರ್ ಅಹಮದ್,ಖಜಾಂಚಿ ಪ್ರಶಾಂತ್,ಸಂತೋಷ್,ಅಬ್ದುಲ್ ಲತೀಫ್,ಉಮೇಶ್ ,ಅರ್ಜುನ್ ಪಟೇಲ್,ಆದರ್ಶ,ನೌಷದ್ ಇತರರು ಹಾಜರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *