ಸಕಲೇಶಪುರ : ಬಾರಿ ಮಳೆ ಸುರಿಯುತ್ತಿರುವುದರಿಂದ ಪೋಷಕರು ಮಕ್ಕಳನ್ನು ಇಂದು ಶಾಲೆಗಳಿಗೆ ಕಳುಹಿಸಬಾರದೆಂದು ಶಾಸಕ ಸಿಮೆಂಟ್ ಮಂಜು ಮನವಿ ಮಾಡಿದ್ದಾರೆ.

ತಾಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಮಳೆಯಿಂದಾಗಿ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.

ಯಾವುದೇ ಸಂದರ್ಭದಲ್ಲಿ ಮರಗಳು ಬಿದ್ದು ಅನಾಹುತ ಸಂಭವಿಸುವ ಸಾಧ್ಯತೆಗಳು ಹೆಚ್ಚಿದೆ. ಈಗಾಗಲೇ ಹಲವು ಶಾಲಾ ಕೊಠಡಿಗಳು ಮಳೆಯಿಂದ ಕುಸಿದಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ತಕ್ಷಣ ಶಾಲೆಗಳಿಗೆ ರಜೆ ಘೋಷಣೆ ಮಾಡಬೇಕಿತ್ತು. ಆದರೆ ರಜೆ ಘೋಷಣೆ ಮಾಡಲು ವಿಳಂಬ ಜಿಲ್ಲಾಧಿಕಾರಿಗಳು ಮುಂದಾಗಿಲ್ಲ.

ಮಳೆಯಿಂದ ಮಕ್ಕಳಿಗೆ ಏನಾದರು ಅನಾಹುತ ಆದಲ್ಲಿ ಜಿಲ್ಲಾಧಿಕಾರಿಗಳೇ ನೇರ ಹೊಣೆಯಾಗಿರುತ್ತಾರೆ. ಮುಂಜಾಗ್ರತ ಕ್ರಮವಾಗಿ ಮಕ್ಕಳ ಸುರಕ್ಷಾ ದೃಷ್ಟಿಯಿಂದ ಪೋಷಕರು ಇಂದು ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬಾರದು ಎಂದು ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *