ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜಿನಲ್ಲಿ ಅದೇ ತರಗತಿಗಳಿಗೆ ಮತ್ತೆ ದಾಖಲಾಗಿ ವ್ಯಾಸಂಗ ಮಾಡಬಹುದು ಎಂದು ಸರ್ಕಾರ ಆದೇಶಿಸಿದೆ.

ಖಾಸಗಿ ಶಾಲೆ, ಕಾಲೇಜುಗಳಲ್ಲಿ ಫೇಲಾದವರು ಅದೇ ಶಾಲೆ, ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅವಕಾಶವಿಲ್ಲ. ಬದಲಿಗೆ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಮರು ದಾಖಲಾತಿ ಪಡೆದು ಮತ್ತೊಂದು ವರ್ಷ ತರಗತಿ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಬಹುದಾಗಿದೆ.

ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣ ವಿದ್ಯಾರ್ಥಿಗಳಲ್ಲಿ ಮತ್ತೆ ಪರೀಕ್ಷೆ ಬರೆಯುವವರ ಸಂಖ್ಯೆ ಹಾಗೂ ಅವರ ಸಂಖ್ಯೆ ಕಡಿಮೆ ಪ್ರಮಾಣದಲ್ಲಿ ಇರುವ ಕಾರಣ ಇದನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಸರ್ಕಾರ ಇಂತಹ ಅವಕಾಶ ಕಲ್ಪಿಸಿದೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *