ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ ಬಾರಿಗೆ ಬಿಯರ್ ದರ ಹೆಚ್ಚಳವಾಗಿದೆ.ಪ್ರತಿ ಬಾಟಲ್ ಗೆ 5 -20 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ.ಕೆಲವು ಕಂಪನಿಗಳ ಬಿಯರ್ ದರ ಕಳೆದ ಗುರುವಾರದಿಂದ ಏರಿಕೆಯಾಗಿದೆ.

ಇನ್ನು ಕೆಲವು ಕಂಪನಿಗಳ ಪರಿಷ್ಕೃತ ದರ ಮಂಗಳವಾರ, ಬುಧವಾರ ಜಾರಿಯಾಗಲಿದೆ. ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಪ್ರತಿ ಬಾಟಲಿಗೆ ಕನಿಷ್ಠ 5 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಲಿದೆ.ಸರ್ಕಾರ ಬಿಯರ್ ಮೇಲಿನ ತೆರಿಗೆಯನ್ನು ಕಳೆದ ಜುಲೈ 1 ರಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿದೆ. ಪ್ರತಿ ಬಾಟಲ್ ಬಿಯರ್ ಬೆಲೆ ಕನಿಷ್ಠ 10 ರೂಪಾಯಿ ಜಾಸ್ತಿಯಾಗಿತ್ತು. ನಂತರ ಬಿಯರ್ ಉತ್ಪಾದನಾ ಕಂಪನಿಗಳು ಕಚ್ಚಾ ಸಾಮಗ್ರಿ ದರ ಹೆಚ್ಚಳ ಕಾರಣ ನೀಡಿ ಪ್ರತಿ ಬಿಯರ್ ಬಾಟಲ್ ಮೇಲೆ ಕನಿಷ್ಠ 5 ರಿಂದ 20 ರೂಪಾಯಿ ಹೆಚ್ಚಳಕ್ಕೆ ತೀರ್ಮಾನಿಸಿವೆ. ರಾಜ್ಯದಲ್ಲಿ ಹೆಚ್ಚಾಗಿ ಬಳಕೆಯಾಗುವ ಲೆಜೆಂಡ್, ಆರ್ಸಿ ಸ್ಟ್ರಾಂಗ್, ನಾಕೌಟ್, ಬುಲೆಟ್, ಪವರ್ ಕೂಲ್ ಸೇರಿ ಎಲ್ಲಾ ಬ್ರಾಂಡ್ ಗಳ ಬಿಯರ್ ಬೆಲೆ ಏರಿಕೆಯಾಗಲಿದೆ ಎನ್ನಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *