ಕೇರಳದಲ್ಲಿ ಭೂಕುಸಿತ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಕೋಡಿಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ.

ಇಪ್ಪತ್ತು ದಿನಗಳಿಂದ ಹಿಂದೆ ನಾನು ಧಾರವಾಡದಲ್ಲಿ ಇದೇ ರೀತಿ ಒಂದು ದುರ್ಘಟನೆ ಆಗಬಹುದು ಎಂದು ಎಚ್ಚರಿಸಿದ್ದೆ.

ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ, ರೋಗರುಜಿನಗಳು ಹೆಚ್ಚಾಗುತ್ತವೆ ಅಂತಾ ಹೇಳಿದ್ದೆ. ಕೇವಲ ಭಾರತದಲ್ಲಿ ಮಾತ್ರವೇ ಅಲ್ಲ. ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತಾ ಹೇಳಿದ್ದೆ. ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತೆ ಬಳಿಕ ಬೇರೆ ಭಾಗಕ್ಕೆ ಹೋಗುತ್ತೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧ ಅಂದರೆ ಸಿಟ್ಟು ಇದರಲ್ಲಿ ಒಳ್ಳೆಯದು ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೆ ಜಾಸ್ತಿ ಇರುತ್ತೆ.

ಇದು ಪ್ರಾಕೃತಿಕ ದೋಷ ಮುಂದುವರೆಯುತ್ತೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಳೆ ಅಮವಾಸ್ಯೆಯವರೆಗೆ ಒಂದು ಭಾಗಕ್ಕೆ ನಿಲ್ಲುತ್ತೆ ಮತ್ತೊಂದು ಭಾಗಕ್ಕೆ ಹೋಗುತ್ತೆ. ಮುಂದೆ ಅನಿಷ್ಟ ಜಾಸ್ತಿ ಇದೆ, ಕತ್ತಲು ಬೆಳಕು ಎರಡು ಇರುತ್ತೆ ಅದರಲ್ಲಿ ಕತ್ತಲು ಜಾಸ್ತಿ ಇರುತ್ತೆ ಎಂದು ಸ್ವಾಮೀಜಿ ಹೇಳಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed