ದೇವರ ನಾಡು ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ.
ಸದ್ಯ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. 100ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಘಟನೆ ಸಂಬಂಧ ಕೇರಳ ಸರ್ಕಾರ ರಾಜ್ಯಾದ್ಯಂತ ಇಂದು (ಜುಲೈ 30) ಮತ್ತು ಇಂದು (ಜುಲೈ 31) ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ.
ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.ಭೂಕುಸಿತ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಇಂದು ವಯನಾಡಿಗೆ ಭೇಟಿ ನೀಡಲಿದ್ದು, ಸಂತ್ರಸ್ತರ ಕುಟುಂಗಳನ್ನು ಭೇಟಿಯಾಗಲಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಸಂಬಂಧ ರಾಕಹುಲ್ ಈಗಾಗಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ವಯನಾಡು ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.